ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಇಂದು ಸಾಲು ಸಾಲು ಅಪಘಾತಗಳು ಸಂಭವಿಸಿದ್ದು, ಸಾವು-ನೋವಿನ ಸಂಖ್ಯೆ ಹೆಚ್ಚಾಗಿದೆ. ಭೀಕರ ಅಪಘಾತ ಬೈಕ್ ಸವಾರರಿಬ್ಬರೂ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಸಾದಲಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಈ ಅಪಘಾತ ನಡೆದಿದೆ. ವೇಗವಾಗಿ ಬಂದ ಕ್ಯಾಂಟರ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ನರಸಿಂಹಪ್ಪ (45) ಮತ್ತು ನಾರಾಯಣಸ್ವಾಮಿ (44) ಎಂದು ಗುರುತಿಸಲಾಗಿದೆ. ಇವರು ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ನಿವಾಸಿಗಳಾಗಿದ್ದಾರೆ. ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣ ಜಖಂ ಆಗಿದ್ದು, ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

