ಚಿಕ್ಕಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಅಡುಗೆ ಮಾಡು ಎಂದಿದ್ದಕ್ಕೆ ಮನನೊಂದ ಯುವತಿ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ.
ಪೇರಸಂದ್ರದ ನಿವಾಸಿ 18 ವರ್ಷದ ಶೃತಿ ಆತ್ಮಹತ್ಯೆಗೆ ಶರಣಾದ ಯುವತಿ. ಅತ್ತೆ ಮನೆಗೆ ಬಂದಿದ್ದ ಯುವತಿಗೆ ಅತ್ತೆ ಅಡುಗೆ ಮಾಡು. ಅಡಿಗೆ ಮಾಡಲು ಕಲಿತ ಹಾಗಾಗುತ್ತೆ ಎಂದು ಬುದ್ಧಿ ಹೇಳಿದ್ದರಂತೆ. ಇಷ್ಟಕ್ಕೇ ನೊಂದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವಿಷ ಸೇವಿಸಿ ತೀವ್ರ ಅಸ್ವಸ್ಥಳಾಗಿದ್ದ ಶೃತಿನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

