HomeKarnatakaಚಿಕ್ಕಪ್ಪನನ್ನೇ ಬರ್ಬರವಾಗಿ ಹತ್ಯೆಗೈದು ಪರಾರಿಯಾದ ಯುವಕ

ಚಿಕ್ಕಪ್ಪನನ್ನೇ ಬರ್ಬರವಾಗಿ ಹತ್ಯೆಗೈದು ಪರಾರಿಯಾದ ಯುವಕ

ಚಿಕ್ಕಬಳ್ಳಾಪುರ: ಯುವಕನೊಬ್ಬ ಸ್ವಂತ ಚಿಕ್ಕಪ್ಪನನ್ನೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರದ ಚೋಳಶೆಟ್ಟಿಗ್ರಾಮದಲ್ಲಿ ನಡೆದಿದೆ.

ರಾಮಕೃಷ್ಣಪ್ಪ ಕೊಲೆಯಾದ ವ್ಯಕ್ತಿ. ಎಂದಿನಂತೆ ಗ್ರಾಮದ ಹಾಲಿನ ಡೈರಿಗೆ ರಾಮಕೃಷ್ಣಪ್ಪ ಹಾಲು ಹಾಕಲು ಬಂದಿದ್ದರು. ಈ ವೇಳೆ ನಾಗರಾಜ್ ಎಂಬ ಯುವಕ ಚಿಕ್ಕಪ್ಪನನ್ನೇ ಕೊಲೆಗೈದು ಎಸ್ಕೇಪ್ ಆಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೈಯಕ್ತಿಕ ದ್ವೇಷದಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ ಪಿ ಡಿ.ಎಲ್.ನಾಗೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆಯಾಗಿರುವ ಆರೋಪಿ ನಾಗರಾಜ್ ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular