HomeLatest Newsಐದು ತಿಂಗಳ ಹಿಂದೆ ವಿವಾಹವಾಗಿದ್ದ ನವವಿವಾಹಿತೆ ಆತ್ಮಹತ್ಯೆಗೆ ಶರಣು

ಐದು ತಿಂಗಳ ಹಿಂದೆ ವಿವಾಹವಾಗಿದ್ದ ನವವಿವಾಹಿತೆ ಆತ್ಮಹತ್ಯೆಗೆ ಶರಣು

ಚಿಕ್ಕಬಳ್ಳಾಪುರ: ಸಂಶಯ ಎಂಬುದು ಎಂತಹ ದುರಂತಕ್ಕೆ ಕಾರಣವಾಗುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ಪತಿಯ ಅನುಮಾನದ ಭೂತಕ್ಕೆ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿಯಲ್ಲಿ ನಡೆದಿದೆ.

ರೂಪಾ (30) ಆತ್ಮಹತ್ಯೆಗೆ ಶರಣಾದ ನವವಿವಾಹಿತೆ. ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ರೂಪಾ ಶವ ಪತ್ತೆಯಾಗಿದೆ. 5 ತಿಂಗಳ ಹಿಂದೆಯಷ್ಟೇ ಮುನಿರಾಜು ಜತೆ ರೂಪಾ ವಿವಾಹವಾಗಿತ್ತು. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಮೂಲದ ರೂಪಾ ಅವರನ್ನು ಹೊನ್ನೇನಹಳ್ಳಿಯ ಮುನಿರಾಜು ಅವರಿಗೆ ವಿವಾಹ ಮಾಡಿಕೊಡಲಾಗಿತ್ತು.

ಆದರೆ ಪತಿ ಮುನಿರಾಜು ಪತ್ನಿ ಮೇಲೆ ಸದಾಕಾಲ ಅನುಮಾನದಿಂದ ನೋಡುತ್ತಿದ್ದ. ಇದೇ ಕಾರಣಕ್ಕೆ ಬೇಸತ್ತು ರೂಪಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಗಳ ಸಾವಿನಿಂದ ಆಘಾತಕ್ಕೊಳಗಾಗಿರುವ ರೂಪಾ ಪೋಷಕರು, ಪತಿ ಮುನಿರಾಜು ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ಈ ಬಗ್ಗೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸಿದ್ದಾರೆ.

ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669


For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular