ಚಿಕ್ಕಬಳ್ಳಾಪುರ: ಬೇರೆ ಮನೆ ಮಾಡುವ ವಿಚಾರವಾಗಿ ಪತಿ-ಪತ್ನಿ ನಡುವೆ ಆರಂಭವಾದ ಜಗಳ ಆತ್ಮಹತ್ಯೆಯಲ್ಲಿ ಅಂತ್ಯವಾಗಿದೆ. ಕ್ಷುಲ್ಲಕ ಕಾರಣಕ್ಕಾಗಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಜಿಲ್ಲೆಯ ಮಂಚನಬೆಲೆ ಗ್ರಾಮದಲ್ಲಿ ಈ ದುರಂತ ನಡೆದಿದೆ. ರಚಿತಾ (24) ಆತ್ಮಹತ್ಯೆಗೆ ಶರಣಾದ ಮಹಿಳೆ. ರಚಿತ ನಾಲ್ಕು ವರ್ಷಗಳ ಹಿಂದೆ ದೊಡ್ಡಬಳ್ಳಾಪುರ ತಾಲೂಕಿನ ಮೀರಾಪುರ ಗ್ರಾಮದ ಕೇಶವ ಎಂಬಾತನ ಜೊತೆ ವಿವಾಹವಾಗಿದ್ದರು. ನಾಲ್ಕು ವರ್ಷಗಳಾದರೂ ದಂಪತಿಗೆ ಮಕ್ಕಳಿರಲಿಲ್ಲ. ಅಲ್ಲದೇ ಇತ್ತೀಚೆಗೆ ಪತಿ-ಪತ್ನಿ ನಡುವೆ ಬೇರೆ ಮನೆ ಮಾಡುವ ವಿಚಾರವಾಗಿ ಗಲಾಟೆ ನಡೆದಿತ್ತು.
ಘಟನೆ ಬಳಿಕ ರಚಿತಾ ಮಂಚನಬೆಲೆಯ ಸಂಬಂಧಿಕರ ಮನೆಗೆ ಬಂದಿದ್ದರು. ಇದೇ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿಕ್ಕಬಳ್ಳಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

