HomeLatest NewsBIG NEWS: ಚಿಕ್ಕಮಗಳೂರು-ಮುಳ್ಳಯ್ಯನಗಿರಿ-ದತ್ತಪೀಠ ಮಾರ್ಗದ ರಸ್ತೆ ಸಂಪೂರ್ಣ ಬಂದ್!

BIG NEWS: ಚಿಕ್ಕಮಗಳೂರು-ಮುಳ್ಳಯ್ಯನಗಿರಿ-ದತ್ತಪೀಠ ಮಾರ್ಗದ ರಸ್ತೆ ಸಂಪೂರ್ಣ ಬಂದ್!

ಚಿಕ್ಕಮಗಳೂರು: ಚಿಕಮಗಳೂರಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ಅವಂತರಗಳು ಸೃಷ್ಟಿಯಾಗಿವೆ. ಬಿರುಗಾಳಿ ಮಳೆಯಿಂದಾಗಿ ಅಲ್ಲಲ್ಲಿ ಗುಡ್ದ ಕುಸಿತವಾಗಿದ್ದರೆ ಮತ್ತೆ ಹಲವೆಡೆ ಬೃಹತ್ ಮರಗಳು ರಸ್ತೆ ಮೇಲೆ ಬಿದ್ದು, ಸಂಚಾರ ಸ್ಥಗಿತಗೊಂಡಿದೆ. ಇನ್ನೊಂದೆಡೆ ಹಲವೆಡೆ ವಿದ್ಯುತ್ ವ್ಯತ್ಯಯವುಂಟಾಗಿದೆ.

ಬಿರುಗಾಳಿ ಮಳೆಯಿಂದಾಗಿ ಬೃಹತ್ ಮರ ರಸ್ತೆಗೆ ಉರುಳಿ ಬಿದ್ದಿದ್ದು, ಚಿಕ್ಕಮಗಳೂರು-ಮುಳ್ಳಯ್ಯನಗಿರಿ-ದತ್ತಪೀಠ ಮಾರ್ಗ ಸಂಪೂರ್ಣ ಬಂದ್ ಆಗಿದೆ.

ಬೆಳ್ಳಂಬೆಳಿಗ್ಗೆ ರಸ್ತೆಯ ಮೇಲೆ ಬೃಹತ್ ಮರ ಬಿದ್ದಿದೆ. ಪ್ರವಾಸಿಗರು, ಸ್ಥಳಿಯರು ರಸ್ತೆ ಮಾರ್ಗ ಬಂದ್ ಆಗಿರುವುದರಿಂದ ಪರದಾಟ ನಡೆಸಿದ್ದಾರೆ. ಕೈಮರದಿಂದ ದತ್ತಪೀಠ ಹಾಗೂ ಮುಳ್ಲಯ್ಯನಗಿರಿಗೆ ಹೋಗುವ ಮಾರ್ಗದಲ್ಲಿ ಮರ ಬಿದ್ದು ಅವಾಂತರ ಸೃಷ್ಟಿಯಾಗಿದೆ. ಕಿರಿದಾದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕಾಗಮಿಸಿರುವ್ ಪೊಲೀಸರು ಮರ ತೆರವುಗೊಳಿಸಿ ಸಂಚಾರ ಸುಗಮಕ್ಕೆ ಅನುವು ಮಾಡಿಕೊಡುತ್ತಿದ್ದಾರೆ. ಪಶ್ಚಿಮ ಘಟ್ಟ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular