BIG NEWS: ಚಿಕ್ಕಮಗಳೂರಿನ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿ

ಚಿಕ್ಕಮಗಳೂರು: ಕಾಡಾನೆ ಉಪಟಳ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ 11 ಗ್ರಾಮಗಳಲ್ಲಿ ನಿಷೆಧಾಜ್ಞೆ ಜಾರಿಗೊಳಿಸಲಾಗಿದೆ.

ಗ್ರಾಮಸ್ಥರು ತೋಟಗಳಿಗೆ ತೆರಳದಂತೆ ಅರಣ್ಯ ಇಲಾಖೆ ಸಿಬ್ಬಂದಿಗಳು ಸೂಚಿಸಿದ್ದಾರೆ. ಆನೆಗಳನ್ನು ಕಾಡಿಗೆ ಕಳುಹಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಕಾಡಾನೆಗಳು ಬೀಡುಬಿಟ್ಟಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಹಲವು ಗ್ರಾಮಗಳ ಜನರು ಜೀವಭಯದಲ್ಲಿ ಕಾಲ ಕಳೆಯುತ್ತಿದ್ದಾರೆ. ಚಿಕ್ಕಮಗಳೂರು ತಾಲೂಕಿನ ತುಡುಕೂರು, ಆಲ್ದೂರುಪುರ, ಹೊಸಹಳ್ಳಿ, ತೋರಣಮಾವು, ಚಿತ್ತುವಳ್ಳಿ ಸೇರಿದಂತೆ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನ.9ರಂದು ಮಧ್ಯಾಹ್ನ ಕಾಫಿ ತೋಟದಲ್ಲಿ ಹಾಕಿದ್ದ ವಿದ್ಯುತ್ ತಂತಿ ತಗುಲಿ ಕಾಡಾನೆಯೊಂದು ಮೃತಪಟ್ಟಿತ್ತು. ಸಾವನ್ನಪ್ಪಿರುವ ಆನೆಯ ಸುತ್ತ 23 ಕಾಡಾನೆಗಳು ಬೀಡುಬಿಟ್ಟಿವೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಚಿಕ್ಕಮಗಳೂರಿನ ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕಾಡಾನೆಗಳು ಕಾಡಿಗೆ ತೆರಳುವವರೆಗೂ ಯಾರೂ ತೋಟಗಳಿಗೆ ಓಡಾದದಂತೆ ಅರಣ್ಯ ಇಲಾಖೆ ಕಟ್ಟಪ್ಪಣೆ ಮಾಡಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read