HomeKarnatakaBREAKING: ನಿಲ್ದಾಣದಲ್ಲೇ ಅಪಘಾತ: KSRTC ಬಸ್ ಚಕ್ರಕ್ಕೆ ಸಿಲುಕಿ ವೃದ್ಧೆ ಸಾವು

BREAKING: ನಿಲ್ದಾಣದಲ್ಲೇ ಅಪಘಾತ: KSRTC ಬಸ್ ಚಕ್ರಕ್ಕೆ ಸಿಲುಕಿ ವೃದ್ಧೆ ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರಿನ ಸರ್ಕಾರಿ ಬಸ್ ನಿಲ್ದಾಣದಲ್ಲಿ ಅಪಘಾತ ಸಂಭವಿಸಿದ್ದು, ಕೆಎಸ್ಆರ್ಟಿಸಿ ಬಸ್ ಮುಂಭಾಗದ ಚಕ್ರಕ್ಕೆ ಸಿಲುಕಿ ವೃದ್ಧೆ ಮೃತಪಟ್ಟಿದ್ದಾರೆ.

80 ವರ್ಷದ ಪುಟ್ಟಮ್ಮ ಮೃತಪಟ್ಟವರು ಎಂದು ಹೇಳಲಾಗಿದೆ. ಬೇಲೂರು ತಾಲೂಕಿನ ಬಿಕ್ಕೋಡು ಗ್ರಾಮದ ಪುಟ್ಟಮ್ಮ ಅವರು ಬಸ್ ಚಕ್ರಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಅವರು ಇಂದು ಚಿಕಿತ್ಸೆ ಪಡೆದುಕೊಳ್ಳಲು ಚಿಕ್ಕಮಗಳೂರಿನ ಆಸ್ಪತ್ರೆಗೆ ಬಂದಿದ್ದರು. ವಾಪಸ್ ಗ್ರಾಮಕ್ಕೆ ತೆರಳಲು ಬಸ್ ನಿಲ್ದಾಣಕ್ಕೆ ಬಂದಿದ್ದಾಗ ಅಪಘಾತ ಸಂಭವಿಸಿದೆ. ಚಿಕ್ಕಮಗಳೂರು ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular