HomeKarnatakaBIG NEWS: ಗಣೇಶ ಮೂರ್ತಿ ತರಲು ಹೊಗುತ್ತಿದ್ದಾಗ ಭೀಕರ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

BIG NEWS: ಗಣೇಶ ಮೂರ್ತಿ ತರಲು ಹೊಗುತ್ತಿದ್ದಾಗ ಭೀಕರ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಎಲ್ಲೆಡೆ ಗಣೇಶ ಚತುರ್ಥಿ ಸಡಗರ ಮನೆ ಮಾಡಿದೆ. ಆದರೆ ಚಿಕ್ಕಮಗಳೂರಿನಲ್ಲಿ ದುರಂತವೊಂದು ಸಂಭವಿಸಿದೆ. ಗಣಪತಿ ಮೂರ್ತಿ ತರಲು ಹೋಗುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ಟಾಟಾ ಏಸ್ ಪಲ್ಟಿಯಾಗಿ ಬಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶ್ರೀಧರ್ (20) ಧನುಷ್ (20) ಮೃತ ಯುವಕರು.

ಗಣಪತಿ ಮೂರ್ತಿ ತರಲೆಂದು 9 ಯುವಕರು ಟಾಟಾ ಏಸ್ ನಲ್ಲಿ ಹೋಗುತ್ತಿದ್ದರು. ಭೈರಾಪುರ ಗೇಟ್ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಏಸ್ ಪಲ್ಟಿಯಾಗಿ ಬಿದ್ದಿದೆ. ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಯುವಕರಿಗೆ ತಲೆಯ ಭಾಗದಲ್ಲಿ ಗಂಭೀರ ಗಾಯಗಳಾಗಿವೆ. ಅವರನ್ನು ಶಿವಮೊಗ್ಗದ ಮೆಗ್ಗಾನ್ ಅಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಿಂಗದಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular