HomeLatest Newsಚಿಕ್ಕಮಗಳೂರು: ಅಸ್ಸಾಂ ಕಾರ್ಮಿಕರ ಹೆಸರಲ್ಲಿ ಬಾಂಗ್ಲಾ ವಲಸಿಗರು ಆಶ್ರಯ ಪಡೆದಿರುವ ಆರೋಪ: ಪರಿಶೀಲಿಸಿದ ಹಿಂದೂ ಮುಖಂಡರ...

ಚಿಕ್ಕಮಗಳೂರು: ಅಸ್ಸಾಂ ಕಾರ್ಮಿಕರ ಹೆಸರಲ್ಲಿ ಬಾಂಗ್ಲಾ ವಲಸಿಗರು ಆಶ್ರಯ ಪಡೆದಿರುವ ಆರೋಪ: ಪರಿಶೀಲಿಸಿದ ಹಿಂದೂ ಮುಖಂಡರ ವಿರುದ್ಧ FIR ದಾಖಲು

ಚಿಕ್ಕಮಗಳೂರು: ಅಸ್ಸಾಂ ಕಾರ್ಮಿಕರ ಹೆಸರಿನಲ್ಲಿ ಬಾಂಗ್ಲಾ ವಲಸಿಗರು ಅಕ್ರಮವಾಗಿ ವಾಸಿರುವ ಆರೋಪ ಚಿಕ್ಕಮಗಳೂರಿನಲ್ಲಿ ನಡೆದಿದ್ದು, ಹಿಂದೂ ಮುಖಂಡರು ತಾವೇ ಖುದ್ದು ವಲಸಿಗರ ದಾಖಲೆ ಪರಿಶೀಲನೆ ನಡೆಸಿದ್ದಕ್ಕೆ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಚಿಕ್ಕಮಗಳೂರಿನ ಮೂಡಿಗೆರೆ ಪಟ್ಟಣದಲ್ಲಿ ಅಸ್ಸಾಂ ಮೂಲದ ಕಾರ್ಮಿಕರ ಹೆಸರಿನಲ್ಲಿ ಬಾಂಗ್ಲಾ ವಲಸಿಗರು ಆಶ್ರಯ ಪಡೆದಿದ್ದಾರೆ ಎಂಬ ಆರೋಪ ಸಂಘರ್ಷಕ್ಕೆ ಕಾರಣವಾಗಿದೆ. ಬಜರಂಗದಳ ಹಾಗೂ ವಿಹೆಚ್ ಪಿ ಕಾರ್ಯಕರ್ತರು ಏಕಾಏಕಿ ತಾವೇ ಸ್ವತಃ ವಲಸಿಗ ಕಾರ್ಮಿಕರ ಆಧಾರ್ ಕಾರ್ಡ್, ಹಾಗೂ ಇತರೆ ಗುರುತಿನ ಚೀಟಿ, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಜರಂಗದಳ ಮುಖಂಡ ಸುದೇವ್, ಸಂತೋಷ್ ಸೇರಿದಂತೆ 9 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮೂಡಿಗೆರೆ ಪಟ್ಟಣದ ವಾರದ ಸಂತೆ ವೇಳೆ ಹಿಂದೂ ಸಣ್ಘಟನೆ ಕಾರ್ಯಕರ್ತರು ಏಕಾಏಕಿ ಪ್ರವೇಶಿಸಿ ಅಸ್ಸಾಂ ಕಾರ್ಮಿಕರ ದಾಖಲೆಗಳನ್ನು ಪರಿಶೀಲಿಸಿದ್ದರಿಂದ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಚಿಕ್ಕಮಗಳೂರಿನಲ್ಲಿ ಕಾಫಿ ಕೊಯ್ಲು ಆರಂಭವಾಗಿರುವುದರಿಂದ ಅಸ್ಸಾಂ ನಿಂದ ಹಲವು ಕಾರ್ಮಿಕರು ಕೆಲಸಕ್ಕಾಗಿ ಆಗಮಿಸಿದ್ದು, ಇವರಲ್ಲಿ ಕೆಲವರು ನಕಲಿ ಗುರುತಿನ ಚೀಟಿ, ಆಧಾರ್ ಕಾರ್ಡ್ ಹೊಂದಿರುವ ಆರೋಪ ಕೇಳಿಬಂದಿದೆ. ಅವರು ಬಾಂಗ್ಲಾದಿಂದ ಅಕ್ರಮವಾಗಿ ಭಾರತಕ್ಕೆ ಅಬ್ಂದವರಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular