ಚಿಕ್ಕಮಗಳೂರು: ಒಂದು ವರ್ಷದ ಮಗುವಿನ ಮೇಲೆ ದತ್ತು ಸಂಸ್ಥೆಯ ಸಿಬ್ಬಂದಿಗಳು ಕುದಿಯುವ ನೀರು ಸುರಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಚಿಕ್ಕಮಗಳೂರಿನ ದತ್ತು ಸಂಸ್ಥೆಯಲ್ಲಿ ಈ ಘಟನೆ ನಡೆದಿತ್ತು. ಒಂದು ವರ್ಷದ ಹೆಣ್ಣು ಮಗುವಿನ ಮೇಲೆ ಸಿಬ್ಬಂದಿ ಕುದಿಯುವ ನೀರು ಸುರಿದಿದ್ದು, ಮಗುವಿನ ಸೊಂಟದ ಕೆಳಭಾಗ ಸುಟ್ಟು ಹೋಗಿದ್ದು, ಮಗು ಸ್ಥಿತಿ ಗಂಭೀರವಾಗಿದೆ. ಮಗುವಿಗೆ ಪ್ಲಾಸ್ಟಿಕ್ ಸರ್ಜರಿ ನಡೆಸಲು ಸಿದ್ಧತೆ ನಡೆಸಲಾಗಿದೆ. ಘಟನೆಯನ್ನು ಮುಚ್ಚಿ ಹಾಕಲು ಯತ್ನಿಸಲಾಗಿತ್ತು. ಇದೀಗ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಅಲ್ಲದೇ ದತ್ತು ಸಂಸ್ಥೆಯ ಆಯಾ ವಿರುದ್ಧ ಪ್ರಕರಣ ದಾಖಲಾಗಿದ್ದು, ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. ಮಕ್ಕಳಿಲ್ಲದ ದಂಪತಿ ಮಗು ದತ್ತುಪಡೆಯಲು ಸಿದ್ಧತೆ ನಡೆಸಿದ್ದರು. ಈ ವೇಳೆ ದತ್ತುಸಂಸ್ಥೆಯ ಸಿಬ್ಬಂದಿಗಳ ಎಡವಟ್ಟಿನಿಂದಾಗಿ ಮಗುವಿನ ಮೇಲೆ ಕುದಿಯುವ ನೀರು ಸುರಿದು ಮಗು ಸುಟ್ಟ ಗಾಯಗಳಿಂದ ನರಳುವಂತಾಗಿದೆ.