HomeLatest NewsBIG NEWS: ಬ್ರೆಡ್ ನಲ್ಲಿ ಮತ್ತು ಬರುವ ಔಷಧಿ ಬೆರೆಸಿ ಕೊಟ್ಟು ದನಗಳನ್ನು ಕದ್ದೊಯ್ದ ಖದೀಮರು!

BIG NEWS: ಬ್ರೆಡ್ ನಲ್ಲಿ ಮತ್ತು ಬರುವ ಔಷಧಿ ಬೆರೆಸಿ ಕೊಟ್ಟು ದನಗಳನ್ನು ಕದ್ದೊಯ್ದ ಖದೀಮರು!

ಚಿಕ್ಕಮಗಳೂರು: ಬ್ರೆಡ್ ಗೆ ಮತ್ತು ಬರುವ ಔಷಧಿ ಬೆರೆಸಿ ತಿನ್ನಿಸಿ ದನಗಳನ್ನು ಕದ್ದೊಯ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ನಡೆದಿದೆ.

ಬಣಕಲ್ ಆಸ್ಪತ್ರೆಯ ಮುಂಭಾಗ ಈ ಘಟನೆ ನಡೆದಿದ್ದು, ಕಳ್ಳರ ಕೈಚಳಕ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳ್ಳರು ಹಸುಗಳಿಗೆ ಬ್ರೆಡ್ ನಲ್ಲಿ ಮತ್ತು ಬರುವ ಔಷಧಿ ಬೆರೆಸಿ ತಿನ್ನಿಸಿದ್ದಾರೆ. ಬಳಿಕ ದನಗಳು ಮಂಕಾಗುತ್ತಿದ್ದಂತೆ ಅವುಗಳ ಸಮೇತ ಕಳ್ಳರು ಪರಾರಿಯಾಗಿದ್ದಾರೆ.

ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಬಂಧಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular