HomeUncategorizedBIG NEWS: ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿರ್ಬಂಧ: ವಾರದ ಸಂತೆಗೂ ಬ್ರೇಕ್

BIG NEWS: ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿರ್ಬಂಧ: ವಾರದ ಸಂತೆಗೂ ಬ್ರೇಕ್

ಚಿಕ್ಕಮಗಳೂರು: ದತ್ತ ಜಯಂತಿ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಇಂದಿನಿಂದ ನಾಲ್ಕು ದಿನಗಳ ಕಾಲ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಹಿಂದೂ ಪರ ಸಂಘಟನೆಗಳು ಬಾಬಾಬುಡನ್ ಗಿರಿಯ ಇನಾಂ ದತ್ತಾತ್ರೇಯ ಪೀಠದಲ್ಲಿ ದಂತ ಜಯಂತಿ ಆಚರಿಸುತ್ತಿದ್ದು, ನಾಳೆಯಿಂದ ಮೂರು ದಿನಗಳಕಾಲ ದತ್ತ ಜಯಂತಿ ನಡೆಯಲಿದೆ. ಬುಧವಾರ ಬೃಹತ್ ಶೋಭಾ ಯಾತ್ರೆ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಾದ್ಯಂತ ಜಿಲ್ಲಾಡಲಿತ ಹಾಗೂ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದೆ.

ಚಿಕ್ಕಮಗಳೂರು ನಗರದಲ್ಲಿ ನಡೆಯಲಿರುವ ವಾರದ ಸಂತೆಗೆ ನಿಷೇಧ ಹೇರಲಾಗಿದೆ. ಡಿಸೆಂಬರ್ 4ರಂದು ದತ್ತ ಪಾದುಕೆ ದರ್ಶನ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಸೇರಿ ಜಿಲ್ಲೆಯ ಪ್ರಮುಖ ಪಟ್ಟಣಗಳು ಬಂದ್ ಆಗಿರಲಿವೆ. ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಜಿಲ್ಲಾಡಳಿತ ಆದೇಶ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಇಂದಿನಿಂದ ಡಿಸೆಂಬರ್ 5ರ ಬೆಳಿಗ್ಗೆ 10ಗಂಟೆಯವರೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಚಂದ್ರದ್ರೋಣ ಪರ್ವತ ಸಾಲಿನ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಸೇರಿದಂತೆ ಸುತ್ತಮುತ್ತಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular