ಚಿಕ್ಕಮಗಳೂರು: ಈದ್ ಮಿಲಾದ್ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದು, ಮುಂಜಾಗೃತಾ ಕ್ರಮವಾಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
ಈದ್ ಮಿಲಾದ್ ಮೆರವಣಿಗೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಹಲವು ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧಿಸಲಾಗಿದೆ. ಅಲ್ಲದೇ ಪೊಲೀಸರು ಕಟ್ಟೆಚ್ಚರ ಕೈಗೊಂಡಿದ್ದಾರೆ.
ಚಿಕ್ಕಮಗಳೂರಿನ ಎಂ.ಜಿ.ರಸ್ತೆ, ಕೆ.ಎಂ.ರಸ್ತೆ, ನಾಯ್ಡು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ರಾತ್ರಿ 10 ಗಂಟೆಯವರೆಗೂ ಈ ರಸ್ತೆಗಳಲ್ಲಿ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಲಾಗಿದೆ. ಮಧ್ಯಾಹ್ನ 2 ಗಂಟೆಯಿಂದ ಈದ್ ಮಿಲಾದ್ ಮೆರವಣಿಗೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಈ ಆದೇಶ ಹೊರಡಿಸಿದ್ದಾರೆ.