HomeLatest NewsBREAKING : 10 ದಿನಗಳಿಂದ ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ 'ಫಾರೆಸ್ಟ್ ಗಾರ್ಡ್' ಶವವಾಗಿ ಪತ್ತೆ, ಕೊಲೆ ...

BREAKING : 10 ದಿನಗಳಿಂದ ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ‘ಫಾರೆಸ್ಟ್ ಗಾರ್ಡ್’ ಶವವಾಗಿ ಪತ್ತೆ, ಕೊಲೆ ಶಂಕೆ.!

ಚಿಕ್ಕಮಗಳೂರು : 10 ದಿನಗಳಿಂದ ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆಯಾಗಿದ್ದಾರೆ.  ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಕರ್ತವ್ಯದಲ್ಲಿದ್ದ ಫಾರೆಸ್ಟ್ ಗಾರ್ಡ್  ಶರತ್ ಕುಮಾರ್ (33) ನಾಪತ್ತೆಯಾಗಿದ್ದರು. ನೀಲಗಿರಿ ಪ್ಲಾಂಟೇಶನ್ ನಲ್ಲಿ ಅವರ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಫಾರೆಸ್ಟ್ ಗಾರ್ಡ್ ಶರತ್ ನೀಲಗಿರಿ ಪ್ಲಾಂಟೇಶನ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಶರತ್ ಮೂಲತಃ ಕೊಡಗು ಜಿಲ್ಲೆಯ ಆಲೂರು ನಿವಾಸಿಯಾಗಿದ್ದಾರೆ. ಸಖರಾಯಪಟ್ಟಣದ ನೀಲಗಿರಿ ತೋಪಿನಲ್ಲಿ ಶರತ್ ಗಾಗಿ ಹುಡುಕಾಟ ನಡೆಸಲಾಗಿತ್ತು. ಅರಣ್ಯ ಸಿಬ್ಬಂದಿ ಮತ್ತು ಪೊಲೀಸರು ಶರತ್ ಗಾಗಿ ಹುಡುಕಾಟ ನಡೆಸಿದ್ದರು. ಆದರೆ ಅವರ ಸುಳಿವೇ ಇರಲಿಲ್ಲ. ಇದೀಗ ಅವರು ಶವವಾಗಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.

ಕೊಡಗಿನಿಂದ 3-4 ತಿಂಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಗೆ ವರ್ಗಾವಣೆಗೊಂಡಿದ್ದರು. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular