ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ 5 ದಿನಗಳ ಕಾಲ ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಚಿಕ್ಕಮಗಳೂರು ನಗರ, ಕೊಪ್ಪ, ಮೂಡಿಗೆರೆ, ಕಳಸ, ಶೃಂಗೇರಿ, ಎನ್.ಆರ್.ಪುರ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಮೇ 25ರಿಂದ ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಮೇ ಅಂತ್ಯದ ವೇಳೆಗೆ ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.