HomeKarnatakaಚಿಕ್ಕಮಗಳೂರು ಜಿಲ್ಲೆಯಲ್ಲಿ 204 ಮಿಮೀ ಮಳೆ ಸಾಧ್ಯತೆ: 3 ದಿನ ಹೈ ಅಲರ್ಟ್ ಘೋಷಣೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ 204 ಮಿಮೀ ಮಳೆ ಸಾಧ್ಯತೆ: 3 ದಿನ ಹೈ ಅಲರ್ಟ್ ಘೋಷಣೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ 115 ರಿಂದ 204 ಮಿ.ಮೀ. ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮೂರು ದಿನ ಹೈಅಲರ್ಟ್ ಘೋಷಣೆ ಮಾಡಲಾಗಿದೆ.

ಹವಾಮಾನ ಇಲಾಖೆ ಸೂಚನೆ ಬೆನ್ನಲ್ಲೇ ಜಿಲ್ಲಾಡಳಿತ ಹೈಅಲರ್ಟ್ ಘೋಷಣೆ ಮಾಡಿದೆ. ಸಾರ್ವಜನಿಕರು, ಪ್ರವಾಸಿಗರು ನದಿಗಳಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ವಿದ್ಯುತ್ ಕಂಬ, ಮರಗಳ ಬಳಿ ನಿಲ್ಲದಂತೆ ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿರಿಯರು ಹೊರಬರಬಾರದು, ಅನಿವಾರ್ಯವಾಗಿದ್ದರೆ, ಮನೆಯವರ ಜೊತೆ ಹೋಗಬೇಕು. ಸಾರ್ವಜನಿಕರು ಜಿಲ್ಲಾಡಳಿತದ ನಿರ್ದೇಶನ ಪಾಲಿಸಬೇಕೆಂದು ಮನವಿ ಮಾಡಲಾಗಿದೆ. ಭಾರಿ ಮಳೆ ಸಾಧ್ಯತೆ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಮೂರು ದಿನ ಹೈಅಲರ್ಟ್ ಘೋಷಣೆ ಮಾಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular