HomeKarnatakaBREAKING: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಪ್ರಪಾತಕ್ಕೆ ಉರುಳಿ, ಕಾರ್ಮಿಕರ ಮನೆ ಮೇಲೆ...

BREAKING: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಪ್ರಪಾತಕ್ಕೆ ಉರುಳಿ, ಕಾರ್ಮಿಕರ ಮನೆ ಮೇಲೆ ಬಿದ್ದ ಜೀಪ್

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನ ಪ್ರವಾಸಕ್ಕೆಂದು ಬಂದ್ದ್ದ ವೇಳೆ ಅವಘಡವೊಂದು ಸಂಭವಿಸಿದೆ. ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪ್ ಚಾಲಕನ ನಿಯಂತ್ರಣ ತಪ್ಪಿ ೩೦ ಅಡಿ ಪ್ರಪಾತಕ್ಕೆ ಉರುಳಿ, ಕಾರ್ಮಿಕರ ಮನೆ ಮೇಲೆ ಬಿದ್ದಿರುವ ಘಟನೆ ನಡೆದಿದೆ.

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದ ಸಾಲಿನ ಝರಿ ಫಾಲ್ಸ್ ಬಳಿ ಈ ಘಟನೆ ನಡೆದಿದೆ. ಕೇರಳಂ ಮೂಲದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದಾಗ ಈ ದುರಂತ ಸಂಭವಿಸಿದೆ. ವೇಗವಾಗಿ ತೆರಳುತ್ತಿದ್ದ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ, ಕಾರ್ಮಿಕರ ಮನೆಯ ಮೇಲೆ ಬಿದ್ದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅದೃಷ್ಟವಶಾತ್ ಚಾಲಕ ಸೇರಿದಂತೆ ಮೂವರು ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜೀಪ್ ಚಾಲಕನ ಅತಿ ವೇಗವೇ ಘಟನೆಗೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೀಪ್ ಬಿದ್ದ ರಭಸಕ್ಕೆ ಕಾರ್ಮಿಕರ ಮನೆಗಳುಗೂ ಹಾನಿಯುಂಟಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular