ಚಿಕ್ಕಮಗಳೂರು: ಸ್ನೇಹಿತರೊಂದಿಗೆ ಕಾಮೇನಹಳ್ಳಿ ಫಾಲ್ಸ್ ನೋಡಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರಿನ ಕಾಮೇನಹಳ್ಳಿ ಫಾಲ್ಸ್ ನೋಡಲೆಂದು ಬೆಳಗಾವಿಯಿಂದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ತೆರಳಿದ್ದರು. ಈ ವೇಳೆ ಜಲಪಾತದ ಬಂಡೆಯ ಮೇಲೆ ನಿಂತಿದ್ದ ವಿದ್ಯಾರ್ಥಿ, ಕಾಲು ಜಾರಿ ಜಲಪಾತಕ್ಕೆ ಬಿದ್ದು ದುರಂತ ಅಂತ್ಯ ಕಂಡಿದ್ದಾರೆ.
ವರುಣ್ (17) ನೀರುಪಾಲಾಗಿ ಸಾವನ್ನಪ್ಪಿರುವ ವಿದ್ಯಾರ್ಥಿ. ಘಟನ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ.
