HomeKarnatakaBIG NEWS: ಮಂಗನ ಕಾಯಿಲೆಗೆ ಮತ್ತೋರ್ವ ಮಹಿಳೆ ಬಲಿ; ಒಂದೇ ದಿನದಲ್ಲಿ 6 ಜನರಲ್ಲಿ ಸೋಂಕು

BIG NEWS: ಮಂಗನ ಕಾಯಿಲೆಗೆ ಮತ್ತೋರ್ವ ಮಹಿಳೆ ಬಲಿ; ಒಂದೇ ದಿನದಲ್ಲಿ 6 ಜನರಲ್ಲಿ ಸೋಂಕು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣ ಮತ್ತೆ ಹೆಚ್ಚುತ್ತಿದ್ದು, ಮತ್ತೋರ್ವ ಮಹಿಳೆ ಬಲಿಯಾಗಿದ್ದಾರೆ.

43 ವರ್ಷದ ಕೊಟ್ರಮ್ಮ ಮಂಗನ ಕಾಯಿಲೆಗೆ ಬಲಿಯಾದ ಕೂಲಿ ಕಾರ್ಮಿಕ ಮಹಿಳೆ. ಕೊಪ್ಪ ತಾಲೂಕಿನ ನುಗ್ಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದೇವಗನ್ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಜ್ವರ, ಸುಸ್ತು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು.

ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಸೌದೆ ತರಲು ಹೋದಾಗ ಸೋಂಕು ತಗುಲಿರುವ ಸಾಧ್ಯತೆ ಇದೆ. ಕಳೆದ ವಾರ ಮಹಿಳೆಯ ರಕ್ತದ ಮಾದರಿಯನ್ನು ವೈದ್ಯರು ಸಂಗ್ರಹಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಕೊಪ್ಪ ತಾಲೂಕಿನಲ್ಲಿ ಒಂದೇ ದಿನದಲ್ಲಿ 6 ಜನರಲ್ಲಿ ಮಂಗನ ಕಾಯಿಲೆ ಸೋಂಕು ದೃಢಪಟ್ಟಿದೆ.

 

For Latest News Updates, Join Our Whatsapp Community🚩
RELATED ARTICLES

Most Popular