ಚಿಕ್ಕಮಗಳೂರು: ಸರ್ಕಾರಿ ಬಸ್ ಹರಿದು ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಹಳೆಹಟ್ಟಿ ಗೇಟ್ ಬಳಿ ನಡೆದಿದೆ. ಕಡೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದವರು ಮೃತಪಟ್ಟಿದ್ದಾರೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹಳೆಹಟ್ಟಿ ಗೇಟ್ ಬಳಿ ಎರಡು ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದವರ ಮೇಲೆ ಕೆಎಸ್ಆರ್ ಟಿಸಿ ಬಸ್ ಹರಿದು ಇಬ್ಬರು ಸವಾರರು ಮೃತಪಟ್ಟಿದ್ದಾರೆ. ಕಡೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ರಾಜಸ್ಥಾನದ ಇಬ್ಬರು ಮೃತಪಟ್ಟಿದ್ದಾರೆ. ಮತ್ತೊಂದು ಬೈಕ್ ಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಜಿಲ್ಲಾ ಮಟ್ಟದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಭಾಗವಹಿಸಲು ಜಿಲ್ಲಾಧಿಕಾರಿ ಕರೆ
ಶಿವಮೊಗ್ಗ: ಸರ್ಕಾರದ ನಿರ್ದೇಶನದಂತೆ ದಿನಾಂಕ 15-09-2026 ರಂದು ಯುವ ಸಂಸತ್ತು ಸಭೆಗೆ ಚಾಲನೆ ನೀಡುವ ಮೂಲಕ ‘ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಶಿವಮೊಗ್ಗ ಇವರ ಜಂಟಿ ಸಹಯೋಗದಲ್ಲಿ ಈ ಕಾರ್ಯಕ್ರಮವು ದಿನಾಂಕ: 15-09-2026 ರ ಬೆಳಿಗ್ಗೆ 10:00 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ಭವನ, ಶಿವಮೊಗ್ಗ ಇಲ್ಲಿ ನಡೆಯಲಿದೆ. ಈ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಎಲ್ಲಾ ಇಲಾಖೆಯ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಕೋರಿದ್ದಾರೆ.
ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ
ಶಿವಮೊಗ್ಗ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ದಿ ನಿಗಮದ ವತಿಯಿಂದ 2026-27 ನೇ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಬ್ಯಾಂಕ್ ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ/ ವಾಹಿನಿ ಯೋಜನೆ, ವಾಸವಿ ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ನೇರಸಾಲ ಯೋಜನೆಗಳಡಿಯಲ್ಲಿ ಆರ್ಯವೈಶ್ಯ ಸಮುದಾಯದ ಆಸಕ್ತರು ಆನ್‌ಲೈನ್ ಅರ್ಜಿ ಸಲ್ಲಿಸಬಹುದು.
ಸಾಮಾನ್ಯ ವರ್ಗದಲ್ಲಿನ ಆರ್ಯವೈಶ್ಯ ಸಮುದಾಯಕ್ಕೆ ಸೇರಿದವರಾಗಿದ್ದು, ನಮೂನೆ-ಜಿ ಯಲ್ಲಿ ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಆಧಾರ್ ಕಾರ್ಡಿನಲ್ಲಿರುವಂತೆ ಅರ್ಜಿದಾರರ ಹೆಸರು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿ ಇರುವಂತೆ ಹೊಂದಾಣಿಕೆಯಾಗಬೇಕು.
ಆಸಕ್ತ ಆರ್ಯವೈಶ್ಯ ಸಮುದಾಯದ ಅರ್ಜಿದಾರರು ವೆಬ್ ಪೋರ್ಟಲ್ https://kacdc.karnataka.gov.in ಮೂಲಕ ಅ.15 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ದೂ.ಸಂ.: 9448451111/ 9611612302 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ದೇವರಾಜ ಅರಸು ಭವನ, ಬಾಲರಾಜ್ ಅರಸು ರಸ್ತೆ, ಕೆ.ಇ.ಬಿ. ಸರ್ಕಲ್ ಹತ್ತಿರ, ಶಿವಮೊಗ್ಗ. ಕಛೇರಿ ದೂ.ಸಂ. 08182-229634ನ್ನು ಸಂಪರ್ಕಿಸುವುದು.

