HomeLatest NewsBREAKING: ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಗುಡ್ಡ ಕುಸಿತ: ಶೃಂಗೇರಿ- ಮಂಗಳೂರು ರಸ್ತೆ ಸಂಚಾರ ಸಂಪೂರ್ಣ ಬಂದ್!

BREAKING: ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಗುಡ್ಡ ಕುಸಿತ: ಶೃಂಗೇರಿ- ಮಂಗಳೂರು ರಸ್ತೆ ಸಂಚಾರ ಸಂಪೂರ್ಣ ಬಂದ್!

ಚಿಕ್ಕಮಗಳೂರು: ಭಾರಿ ಮಳೆಯಿಂದಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಲ್ಲಲ್ಲ ಗುಡ್ಡ ಕುಸಿತ ಸಂಭವಿಸಿದೆ. ನೆಮ್ಮಾರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಬಳಿಯ ನೆಮ್ಮಾರುವಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಹಿಂದೆ ಗುಡ್ಡ ಕುಸಿದ ಜಾಗದಲ್ಲಿಯೇ ಮತ್ತೆ ಗುಡ್ಡ ಕುಸಿದಿದೆ. ಒಂದೆಡೆ ಧಾರಾಕಾರ ಮಳೆ, ಮತ್ತೊಂದೆಡೆ ಗುಡ್ಡ ಕುಸಿತವುಂಟಾಗಿದ್ದು, ಶೃಂಗೇರಿ-ಮಂಗಳೂರು ಮಾರ್ಗದಲ್ಲಿ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ.

ರಸ್ತೆಯಲ್ಲಿ ಬಿದ್ದಿರುವ ಮಣ್ಣು ತೆರಲು ಕಾರ್ಯಾಚರಣೆಗೆ ಮಳೆ ಅಡ್ಡಿಯಾಗಿದ್ದು, ವಿಳಂಬವಾಗುತ್ತಿದೆ. ಶೃಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular