ಚಿಕ್ಕಮಗಳೂರು: 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಮೆಸ್ಕಾಂ ನ ಜೂನಿಯರ್ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದವರು. ಗುತ್ತಿಗೆದಾರನಿಂದ 40 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ ವೇಳೆ ಮಲ್ಲಿಕಾರ್ಜುನಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ ಡಿವೈಎಸ್ ಪಿ ತಿರುಮಲೇಶ್ ಹಾಗೂ ಇನ್ಸ್ ಪೆಕ್ಟರ್ ಮಲ್ಲಿಕಾರ್ಜುನ ಬಾಲು ಹೆಚ್.ಎನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
