HomeKarnatakaBIG NEWS: ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಮತ್ತೆ ಬೆಂಕಿ ಅವಘಡ: ಹೊತ್ತಿ ಉರಿದ ಶೋಲಾ ಹುಲ್ಲುಗಾವಲು...

BIG NEWS: ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಮತ್ತೆ ಬೆಂಕಿ ಅವಘಡ: ಹೊತ್ತಿ ಉರಿದ ಶೋಲಾ ಹುಲ್ಲುಗಾವಲು ಪ್ರದೇಶ; ಅಪಾರ ಅರಣ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಮತ್ತೆ ಬೆಂಕಿ ಅವಘಡ ಸಂಭವಿಸಿದೆ.

ತಡರಾತ್ರಿ ಕಿಡಿಗೇಡಿಗಳು ಬೆಟ್ಟದ ಸಾಲಿನಲ್ಲಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಕಳೆದ ವಾರವಷ್ಟೇ ಈ ಭಾಗದಲ್ಲಿ ಬೆಂಕಿ ಅವಗಹ್ಡ ಸಂಭವಿಸಿ ಸಾವಿರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿತ್ತು. ಇದೀಗ ಮತ್ತೆ ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಮುಳ್ಳಯ್ಯನಗಿರಿ, ದೇವರಮನೆ ಗುಡ್ಡ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಶೋಲಾ ಹುಲ್ಲುಗಾವಲು ಪ್ರದೇಶ ಸಂಪೂರ್ಣ ಹೊತ್ತಿ ಉರಿದಿದೆ. ಬೆಂಕಿಯ ಕೆನ್ನಾಲಿಗೆಗೆ ನೂರಾರು ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸತತವಾಗಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಬೆಂಕಿ ನಿಯಂತ್ರಣಕ್ಕೆ ಬಂದಿದೆ ಎನ್ನಲಾಗಿದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular