HomeLatest NewsBREAKING: ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ: ಬಜರಂಗದಳದ ಕಾರ್ಯಕರ್ತ ಮಿಥುನ್ ಅರೆಸ್ಟ್

BREAKING: ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ: ಬಜರಂಗದಳದ ಕಾರ್ಯಕರ್ತ ಮಿಥುನ್ ಅರೆಸ್ಟ್

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ಬ್ಯಾನರ್ ತೆರವು ವಿಚಾರವಾಗಿ ಗಲಾಟೆ ನಡೆದು ಕಾಂಗ್ರೆಸ್ ಮುಖಂಡ ಗಣೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗದಳ ಕಾರ್ಯಕರ್ತನನ್ನು ಬಂಧಿಸಲಾಗಿದೆ.

ಮಿಥುನ್ ಬಂಧಿತ ಆರೋಪಿ. ಗಣೇಶ್ ಹತ್ಯೆ ಪ್ರಕರಣದ ತನಿಖೆ ವೇಳೆ ಬಜರಂಗದಳ ಕಾರ್ಯಕರ್ತ ಮಿಥುನ್ ಭಾಗಿಯಾಗಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಮಿಥುನನನ್ನು ಬಂಧಿಸಲಾಗಿದೆ.

ಚಿಕ್ಕಮಗಳೂರಿನಲ್ಲಿ ಶುಕ್ರವಾರ ರಾತ್ರಿ ಬ್ಯಾನರ್ ತೆರವು ವಿಚಾರವಾಗಿ ಗಲಾಟೆ ನಡೆದು ಈ ವೇಳೆ ಕಾಂಗ್ರೆಸ್ ಮುಖಂಡ ಗಣೇಶ್ ಎಂಬಾತನನ್ನು ದುಷ್ಕರ್ಮಿಗಳು ಬರಬರವಾಗಿ ಹತ್ಯೆ ಮಾಡಿದ್ದರು. ಗಲಾಟೆ ವೇಳೆ ಪ್ರಮುಖ ಆರೋಪಿಗಳಾಗಿರುವ ಸಂಜಯ್ ಹಾಗೂ ನಾಗಭೂಷಣ್ ಎಂಬುವವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಳಿದ ಮೂವರು ಆರೋಪಿಗಳಾದ ನಿತಿನ್, ದರ್ಶನ್, ಅಜಯ್ ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗಿದೆ. ಇದೀಗ ಆರನೇ ಆರೋಪಿ ಮಿಥುನ್ ನನ್ನು ಬಂಧಿಸಲಾಗಿದೆ. ಮಿಥುನ್ ಎ1 ಆರೋಪಿ ಸಂಜಯ್ ಸ್ನೇಹಿತ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular