BIG NEWS: ಮೋಸ್ಟ್ ವಾಂಟೆಡ್ 6 ನಕ್ಸಲರು ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗತಿ

ಚಿಕ್ಕಮಗಳೂರು: ಚಿಕ್ಕಮಗಳೂರು ಅರಣ್ಯದಲ್ಲಿ ಅಡಗಿರುವ ಮೋಸ್ಟ್ ವಾಂಟೆಡ್ 6 ನಕ್ಸಲರು ನಾಳೆ ಜಿಲ್ಲಾಡಳಿತದ ಮುಂದೆ ಶರಣಾಗಲು ನಿರ್ಧರಿಸಿದ್ದಾರೆ. ಈಗಾಗಲೇ ನಕ್ಸಲರು ಹಾಗೂ ಸರ್ಕಾರದ ನಡುವಿನ ಮಾತುಕತೆ ಪೂರ್ಣಗೊಂಡಿದೆ ಎಂದು ತಿಳಿದುಬಂದಿದೆ.

ದಕ್ಷಿಣ ಭಾರತದ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ 6 ನಕ್ಸಲರು ನಾಳೆ ಶರಣಾಗತರಾಗಲಿದ್ದಾರೆ. ರಾಜ್ಯ ಸರ್ಕಾರ ನಕ್ಸಲರ ಶರಣಾಗತಿ ಪ್ರಕ್ರಿಯೆಯನ್ನು ಈಗಾಗಲೇ ಮುಗಿಸಿದ್ದು, ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಅಧಿಕೃತವಾಗಿ ಶರಣಾಗಲಿದ್ದಾರೆ.

ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ತಮಿಳುನಾಡಿನ ಕೆ ವಸಂತ ಅಲಿಯಾಸ್ ರಮೇಶ್, ಕೇರಳದ ಜೀಶ, ಆಂಧ್ರಪ್ರದೇಶದ ಮಾರೆಪ್ಪ ಅರೋಲಿ ಶರಣಾಗತರಾಗುವ ನಕ್ಸಲರು. ನಕ್ಸಲ್ ನಾಯಕ ವಿಕ್ರಂಗೌಡ ಎನ್ ಕೌಂಟರ್ ಪ್ರಕರಣದ ಬಳಿಕ ಆತನ ಅನುಯಾಯಿಗಳಾಗಿದ್ದ ನಕ್ಸಲರಿಗೆ ಶರಣಾಗುವಂತೆ ಸರ್ಕಾರ ಸೂಚನೆ ನೀಡಿತ್ತು. ಶರಣಾದ ನಕ್ಸಲರಿಗೆ ಆರ್ಥಿಕ, ಸಾಮಾಜಿಕ ನೆರವು, ಕಾನೂನು ನೆರವು ನೀಡುವುದಾಗಿ ಭರವಸೆ ನೀಡಿತ್ತು. ಈ ಬೆಳವಣಿಗೆ ಬೆನ್ನಲ್ಲೇ 6 ನಕ್ಸಲರು ಶರಣಾಗಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read