HomeLatest NewsBIG NEWS: ಹೆದ್ದಾರಿ ಮೇಲೆ ಗುಡ್ಡ ಕುಸಿತ: ಶೃಂಗೇರಿ-ಕಾರ್ಕಳ ರಸ್ತೆ ಸಂಚಾರ ಸ್ಥಗಿತ

BIG NEWS: ಹೆದ್ದಾರಿ ಮೇಲೆ ಗುಡ್ಡ ಕುಸಿತ: ಶೃಂಗೇರಿ-ಕಾರ್ಕಳ ರಸ್ತೆ ಸಂಚಾರ ಸ್ಥಗಿತ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ವರುಣಾರ್ಭಟಕ್ಕೆ ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ.

ಭಾರಿ ಮಳೆಯಿಂದಾಗಿ ಹಲವೆಡೆ ಭೂಕುಸಿತ ಸಂಭವಿಸಿದೆ. ಶೃಂಗೇರಿಯ ನೆಮ್ಮಾರ್ ಬಳಿ ರಸ್ತೆಯ ಮೇಲೆ ಗುಡ್ಡ ಕುಸಿದಿದ್ದು, ವಾಹನ ಸಂಚಾರ ಬಂದ್ ಆಗಿದೆ. ಹೆದ್ದಾರಿ ಮೇಲೆ ರಸ್ತೆಯ ಮೇಲೆ ಗುಡ್ಡ ಕುಸಿದ ಪರಿಣಾಮ ಶೃಂಗೇರಿ-ಕಾರ್ಕಳ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಸ್ತೆಯ ಮೇಲೆ ಬಿದ್ದಿರುವ ಮಣ್ಣನ್ನು ಜೆಸಿಬ್ ಮೂಲಕ ತೆರವು ಮಾಡಲಾಗುತ್ತಿದೆ. ಪೊಲೀಸರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.

ಚಿಕ್ಕಮಗಳೂರಿನಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಕೊಪ್ಪ, ಶೃಂಗೇರಿ, ಎನ್ ಆರ್ ಪುರ, ಕಳಸ, ಶೃಂಗೇರಿ ತಾಲೂಕುಗಳ ಅಂಗನಾವಿಡಿ, ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular