HomeLatest NewsBREAKING: ಬಿರುಗಾಳಿ ಮಳೆಗೆ ಬೈಕ್ ಸವಾರನ ಮೇಲೆ ಬಿದ್ದ ಮರ: ವ್ಯಕ್ತಿ ಸ್ಥಳದಲ್ಲೇ ಸಾವು!

BREAKING: ಬಿರುಗಾಳಿ ಮಳೆಗೆ ಬೈಕ್ ಸವಾರನ ಮೇಲೆ ಬಿದ್ದ ಮರ: ವ್ಯಕ್ತಿ ಸ್ಥಳದಲ್ಲೇ ಸಾವು!

ಚಿಕ್ಕಮಗಳೂರು: ಮಲೆನಾಡು, ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವಾರು ಅನಾಹುತಗಳು ಸಂಭವಿಸುತ್ತಿವೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಬೈಕ್ ಸವಾರನ ಮೇಲೆ ಮರ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ರಸ್ತೆಯಲ್ಲಿ ತೆರಳುತ್ತಿದ್ದ ಬೈಕ್ ಸವಾರನ ಮೇಲೆ ಬಿರುಗಾಳಿ ಮಳೆಗೆ ಮರ ಬಿದ್ದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಎನ್.ಆರ್. ಪುರ ಬಳಿ ಈ ದುರಂತ ಸಂಭವಿಸಿದೆ.

ಕಡಬಗೆರೆ ಬಳಿ ಬಿಳುಕೊಪ್ಪ ಗ್ರಾಮದ ಅನಿಲ್ (53) ಮೃತ ದುರ್ದೈವಿ. ಚಿಕ್ಕಮಗಳೂರಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜಿಲ್ಲಾಡಳಿತ ಅಲರ್ಟ್ ಘೋಷಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular