BIG NEWS: ಶಾಲಾ ಆವರಣದಲ್ಲಿ ವಿದ್ಯುತ್ ಶಾಕ್ ಗೆ ಬಾಲಕ ಬಲಿ: 8 ಸಿಬ್ಬಂದಿಗಳು ಸಸ್ಪೆಂಡ್

ಚಿಕ್ಕಮಗಳೂರು: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ವಿದ್ಯಾರ್ಥಿಯೊಬ್ಬ ವಿದ್ಯುತ್ ಶಾಕ್ ನಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೊರಾರ್ಜಿದೇಸಾಯಿ ವಸತಿ ಶಾಲೆಯ ಆವರಣದಲ್ಲಿ ಈ ಘಟನೆ ನಡೆದಿದೆ. 7 ನೇ ತರಗತಿ ವಿದ್ಯಾರ್ಥಿ ಆಕಾಶ್, ಶಾಲೆಯ ಆವರಣದಲ್ಲಿದ್ದ ನೇರಳೆ ಮರದಲ್ಲಿದ್ದ ಹಣ್ಣು ಕೀಳಲು ಹೋಗಿ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದಾನೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಭಾರಿ ಪ್ರಾಂಶುಪಾಲರು ಸೇರಿ 8 ಸಿಬ್ಬಂದಿಗಳನ್ನು ಅಮಾನತುಮಾಡಲಾಗಿದೆ.

ವಿದ್ಯಾರ್ಥಿ ಆಕಾಶ್ ಜೂನ್ 15ರಂದು ಸ್ನೇಹಿತರೊಂದಿಗೆ ಶಾಲೆಯ ಆವರಣದಲ್ಲಿದ್ದ ನೇರಳೆ ಹಣ್ಣು ಕೀಳಲು ಹೋಗಿದ್ದ. ಮರದಿಂದ ಇಳಿಯುವಾಗ ಬೀಳುವಂತಾಗಿದ್ದ, ಆಯತಪ್ಪಿ ಪಕ್ಕದಲ್ಲಿದ್ದ ವಿದ್ಯುತ್ ತಂತಿ ಹಿಡಿದುಕೊಂಡಿದ್ದಾನೆ. ಏಕಾಏಕಿ ವಿದ್ಯುತ್ ಪ್ರವಹಿಸಿ ಬಾಲಕ ಸಾವನ್ನಪ್ಪಿದ್ದಾನೆ. ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಿಲ್ಲ.

ಶಾಲೆಯ ಅಧಿಕಾರಿಗಳ ಬೇಜವಬ್ದಾರಿಯಿಂದ ಬಾಲಕ ಸಾವು ಹಿನ್ನೆಲೆಯಲ್ಲಿ ಪ್ರಭಾರಿ ಪ್ರಾಂಶುಪಾಲರು, ನಿಲಯ ಪಾಲಕ ಸೇರಿದಂತೆ 8 ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read