BREAKING: ಶರಣಾಗತಿಯಾಗಿದ್ದ ನಕ್ಸಲ್ ರವೀಂದ್ರಗೆ 14 ದಿನ ನ್ಯಾಯಾಂಗ ಬಂಧನ

ಚಿಕ್ಕಮಗಳೂರು: ಶರಣಾಗತಿಯಾಗಿದ್ದ ನಕ್ಸಲ್ ರವೀಂದ್ರಗೆ 16 ದಿನ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯ ಜೆಎಂಎಫ್ಸಿ ಕೋರ್ಟ್ ನಿಂದ ಈ ಬಗ್ಗೆ ಆದೇಶಿಸಲಾಗಿದೆ.

ಕೊಪ್ಪ ಡಿವೈಎಸ್ಪಿ ಬಾಲಾಜಿ ಸಿಂಗ್ ಅವರು ನಕ್ಸಲ್ ರವೀಂದ್ರರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇಂದು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ನಕ್ಸಲ್ ರವೀಂದ್ರ ಶರಣಾಗಿದ್ದರು. ಅವರ ವಿರುದ್ಧ ಕರ್ನಾಟಕದಲ್ಲಿ 17 ಪ್ರಕರಣಗಳು ದಾಖಲಾಗಿದ್ದವು.

ರಾಜ್ಯದಲ್ಲಿ ವಿಕ್ರಂ ಗೌಡ ಎನ್‌ಕೌಂಟರ್ ಬಳಿಕ ಉಳಿದಿದ್ದ ಏಕೈಕ ನಕ್ಸಲ್ ರವೀಂದ್ರ ನಾಪತ್ತೆಯಾಗಿದ್ದರು. ಕಳೆದ 18 ವರ್ಷಗಳಿಂದ ಭೂಗತರಾಗಿದ್ದ ಇವರು ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಕೋಟೆಹೊಂಡ ಗ್ರಾಮದವರಾಗಿದ್ದಾರೆ. ಇತ್ತೀಚೆಗಷ್ಟೇ ಶರಣಾದ 6 ಮಂದಿ ನಕ್ಸಲರ ತಂಡದಲ್ಲಿದ್ದರು. ಪಶ್ಚಿಮಘಟ್ಟದಲ್ಲಿ ಶಸ್ತ್ರಾಸ್ತ್ರ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ಎಲ್ಲಾ ಮಾವೋವಾದಿಗಳು ಮುಖ್ಯವಾಹಿನಿಗೆ ಬಂದಂತಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read