BIG NEWS: ಪ್ರವಾಸಿಗರ ಗಮನಕ್ಕೆ: ಚಿಕ್ಕಮಗಳೂರಿನ ಈ ಪ್ರವಾಸಿ ತಾಣಗಳಿಗೆ 3 ದಿನ ನಿರ್ಬಂಧ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಶ್ರೀರಾಮಸೇನೆ ನೇತೃತ್ವದಲ್ಲಿ ದತ್ತಮಾಲಾ ಅಭಿಯಾನ ಆರಂಭವಾಗಿದೆ. ದತ್ತಮಾಲಾಧಾರಿಗಳು 7 ದಿನಗಳಕಾಲ ವ್ರತದಲ್ಲಿದ್ದು, ನವೆಂಬರ್ 10ರಂದು ದತ್ತಪೀಠಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಚಿಕ್ಕಮಗಳೂರಿನಾದ್ಯಂತ ಕಟ್ಟೆಚ್ಚರ ವಹಿಸಿದೆ.

ನವೆಂಬರ್ 10ರಂದು ದತ್ತಪೀಠದಲ್ಲಿ ಹೋಮ-ಹವನ, ವಿಶೇಷ ಪೂಜೆ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ, ಗಾಳಿಕೆರೆ ಸೇರಿದಂತೆ ಸುತ್ತಮುತ್ತಲಿನ ಪ್ರವಾಸಿ ತಾಣಗಳಿಗೆ ನವೆಂಬರ್ 9ರ ಬೆಳಿಗ್ಗೆ 6ಗಂಟೆಯಿಂದ ನವೆಂಬರ್ 11ರ ಬೆಳಿಗ್ಗೆ 6 ಗಂಟೆಯವರೆಗೆ ನಿರ್ಬಂಧಿಸಲಾಗಿದೆ.

ನವೆಂಬರ್ 10ರಂದು ದತ್ತಾಮಾಲಾಧಾರಿಗಳು ಶ್ರೀಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಇನಾಂ ದತ್ತಪೀಠಕ್ಕೆ ಭೇಟಿ ನಿಡಲಿದ್ದಾರೆ. ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಮಲಾಧಾರಿಗಳು ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕರಿ ಮೀನಾ ನಾಗರಾಜ್ ಪ್ರವಾಸಿ ತಾಣಗಳ ಭೇಟಿಗೆ ನಿರ್ಬಂಧ ವಿಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read