ದಾರಿ ತಪ್ಪಿದ ಪತ್ನಿಯಿಂದ ಘೋರ ಕೃತ್ಯ: ಪ್ರಿಯಕರೊಂದಿಗೆ ಸೇರಿ ಪತಿ ಕೊಲೆ

ಚಿಕ್ಕಮಗಳೂರು: ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯನ್ನು ಕೊಲೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಸಖರಾಯಪಟ್ಟಣ ಸಮೀಪದ ದೊಡ್ಡಿಬೀರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಜಯಣ್ಣ(38) ಕೊಲೆಯಾದ ವ್ಯಕ್ತಿ. ಆತನ ಪತ್ನಿ ಶ್ರುತಿ ಮತ್ತು ಪ್ರಿಯಕರ ಕಿರಣ್ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪತಿ ಜಯಣ್ಣನಿಗೆ ಮದ್ಯದಲ್ಲಿ ವಿಷ ಬೆರೆಸಿ ಕುಡಿಸಿ ಬಳಿಕ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ.

ಜೂನ್ 16ರಂದು ರಾತ್ರಿ ಶ್ರುತಿ ತನಗೆ ಹೊಟ್ಟೆ ನೋವು ಕಾಣಿಸಿಕೊಂಡಿರುವುದಾಗಿ ಸುಳ್ಳು ಹೇಳಿ ಜಯಣ್ಣ ಮತ್ತು ಕಿರಣ್ ನನ್ನು ಅರಸೀಕೆರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾಳೆ. ಮಾರ್ಗ ಮತ್ತೆ ಜಯಣ್ಣನಿಗೆ ಮದ್ಯದಲ್ಲಿ ವಿಷ ಬೆರೆಸಿ ಕುಡಿಸಿದ ನಂತರ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಹೊಟ್ಟೆ ನೋವಿನಿಂದ ಜಯಣ್ಣ ಮೃತಪಟ್ಟಿದ್ದಾನೆ ಎಂದು ಊರಿನವರನ್ನು ನಂಬಿಸಿದ್ದಾರೆ. ಪೊಲೀಸರು ತನಿಖೆ ಕೈಗೊಂಡ ಸಂದರ್ಭದಲ್ಲಿ ಅಕ್ರಮ ಸಂಬಂಧದಿಂದ ಕೊಲೆ ಮಾಡಿರುವುದು ಗೊತ್ತಾಗಿದೆ. ವಿಚಾರಣೆ ಬಳಿಕ ಇಬ್ಬರನ್ನು ಬಂಧಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read