ಚಿಕ್ಕಮಗಳೂರು: ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಭೀಕರ ಅಪಘಾತ ಸಂಭವಿಸಿದೆ. ಮೆರವಣಿಗೆಯಲ್ಲಿ ಸಾಗುತ್ತಿದ್ದ ಜನರ ಮೇಲೆ ವೇಗವಾಗಿ ಬಂದ ಕಾರು ಹರಿದಿದ್ದು, ಸ್ಥಳದಲ್ಲೇ ೭ ವರ್ಶದ ಬಾಲಕಿ ಸಾವನ್ನಪ್ಪಿದ್ದಾಳೆ. 9 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಬಿಳೆಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆಯ ಸಂಭ್ರಮದ ವೇಳೆ ಈ ದುರಂತ ಸಂಭವಿಸಿದೆ. ವೇಗವಾಗಿ ಬಂದ ಕಾರೊಂದು ಮೆರವಣಿಗೆಯಲ್ಲಿದ್ದ ಜನರ ಮೇಲೆ ಹರಿದ ಪರಿಣಾಮ 7 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದು, ಒಂಬತ್ತು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ಕಾರಿನಿಂದ ನಿಯಂತ್ರಣ ತಪ್ಪಿದ ಕಾರೊಂದು ಏಕಾಏಕಿ ಜನರ ಗುಂಪಿಗೆ ನುಗ್ಗಿ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ.ಅಪಘಾತದಲ್ಲಿ ಸಾನ್ವಿ (7) ಎಂಬ ಬಾಲಕಿ ಕಾರು ಗುದ್ದಿದ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ನಿಶ್ಚಿತ (11), ತೃಪ್ತಿ (11), ತಿಮ್ಮರಾಜು (45), ಉಷಾ (22), ಸೃಷ್ಟಿ (18), ನಾಗರಾಜು (28), ಚೇತನ್ (16) ಸೇರಿದಂತೆ ಒಟ್ಟು 9 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಎಂಟು ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರಿನಲ್ಲಿದ್ದ ಸುಧಾಕರ್ ಎಂಬುವವರಿಗೂ ಗಾಯಗಳಾಗಿದ್ದು, ಅವರ ಸ್ಥಿತಿಯೂ ಗಂಭೀರವಾಗಿದೆ.
ಘಟನೆಯಿಂದ ರೊಚ್ಚಿಗೆದ್ದ ಗ್ರಾಮಸ್ಥರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆ ಮುಂಭಾಗ ಜಮಾಯಿಸಿ,ಗಾಯಾಳು ಕಾರು ಚಾಲಕನನ್ನು ಹಾಸನಕ್ಕೆ ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅನ್ನು ತಡೆದು ಆಕ್ರೋಶ ಹೊರಹಾಕಿದರು. ಸ್ಪತ್ರೆ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

