ಚಿಕ್ಕಮಗಳೂರು: ರಾಜ್ಯಾದ್ಯಂತ 70ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಚಿಕ್ಕಮಗಳೂರಿನಲ್ಲಿ ಕನ್ನಡದ ಬದಲು ಸಂಪೂರ್ಣವಾಗಿ ಇಂಗ್ಲೀಷ್ ನಲ್ಲಿದ್ದ ಜಾಹೀರಾತು ಫಲಕಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಚಿಕ್ಕಮಗಳೂರಿನ ವಿವಿಧೆಡೆಗಳಲ್ಲಿ ಇಂಗ್ಲೀಷ್ ಬೋರ್ಡ್ ಗಳು, ಜಾಹೀರಾತು ಬೋರ್ಡ್ ಗಳು ರಾರಾಜಿಸುತ್ತಿದ್ದು, ಕನ್ನಡಪರ ಸಂಘಟನೆಗಳು ಬೋರ್ಡ್ ಗಳನ್ನು ಕಿತ್ತು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಮೆರವಣಿಗೆ ತೆರಳುತ್ತಿದ್ದ ವೇಳೆ ಆಜಾದ್ ಪಾರ್ಕ್ ವೃತ್ತದಲ್ಲಿ ನಿಯಮ ಮೀರಿ ಅಳವಡಿಸಿದ್ದ ಬೃಹತ್ ಇಂಗ್ಲೀಷ್ ಬೋರ್ಡ್, ಇಂಗ್ಲೀಷಿನಲ್ಲಿದ್ದ ಜಾಹೀರಾತುಗಳು ಕನ್ನಡ ಪರ ಸಂಘಟನೆ ಕಾರ್ಯಕರ್ತರ ಕಣ್ಣಿಗೆ ಬಿದ್ದಿವೆ. ತಕ್ಷಣ ಕಾರ್ಯಕರ್ತರು ಇಂಗ್ಲೀಷ್ ಬೋರ್ಡ್ ಗಳನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
