HomeKarnatakaBIG NEWS: ಚಾರಣಕ್ಕೆ ಬಂದಿದ್ದ ಕೇರಳ ಮೂಲದ ಮತೋರ್ವ ಬಾಲಕಿ ನಾಪತ್ತೆ

BIG NEWS: ಚಾರಣಕ್ಕೆ ಬಂದಿದ್ದ ಕೇರಳ ಮೂಲದ ಮತೋರ್ವ ಬಾಲಕಿ ನಾಪತ್ತೆ

ಚಿಕ್ಕಮಗಳೂರು: ಕೊಡಗು ಜಿಲ್ಲೆಯ ತಡಿಯಂಡಿಮೊಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಯುವತಿ ಶರಣ್ಯಾ ನಾಪತ್ತೆಯಾಗಿದ್ದ ಪ್ರಕರಣದ ಬೆನ್ನಲ್ಲೇ ಚಿಕ್ಕಮಗಳೂರಿನಲ್ಲಿಯೂ ಅಂತದ್ದೇ ಘಟನೆ ನಡೆದಿದೆ. ಕೇರಳ ಮೂಲದ ಅಪ್ರಾಪ್ತ ಬಾಲಕಿಯೊಬ್ಬಳು ಪ್ರವಾಸಕ್ಕೆ ಬಂದವಳು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾಳೆ.

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ 14 ವರ್ಷದ ಕೇರಳ ಮೂಲದ ಬಾಲಕಿ ಶ್ರೀ ನಂದಾ ನಾಪತ್ತೆಯಾಗಿದ್ದಾಳೆ. 40 ಜನರ ಪ್ರವಾಸಿ ತಂಡದೊಂದಿಗೆ ಬಂದಿದ್ದ ಶ್ರೀ ನಂದಾ ಮಾಣಿಕ್ಯಧಾರಾ ಬಳಿ ಕಾಣೆಯಾಗಿದ್ದು, ಕೂಡಲೇ ಸ್ಥಳೀಯರು ಹುಡುಕಾಟ ನಡೆಸಿದ್ದರು. ಆದಾಗ್ಯೂ ಆಕೆ ಪತ್ತೆಯಗೈಲ್ಲ.

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿ ಶ್ರೀ ನಂದಾ ನಿನ್ನೆ ಸಂಜೆ ಸುಮಾರು 6 ಗಂಟೆಯಿಂದ ಕಾಣೆಯಾಗಿದ್ದಾಳೆ. ಶ್ರೀನಂದಾ ಕೇರಳದ ಪಾಲಕ್ಕಾಡ್ ಮೂಲದ 14 ವರ್ಷದ ಈ ಬಾಲಕಿ. ಪೋಷಕರೊಂದಿಗೆ ಸುಮಾರು 40 ಜನರ ತಂಡದೊಂದಿಗೆ ಪ್ರವಾಸಕ್ಕೆ ಬಂದಿದ್ದಳು. ಈ ವೇಳೆ ಚಂದ್ರದ್ರೋಣ ಪರ್ವತ ಸರಣಿಯ ಮಾಣಿಕ್ಯಧಾರಾ ಸಮೀಪದಲ್ಲಿ ಕಾಣೆಯಾಗಿರುವುದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಲಕಿ ಕಾಣೆಯಾಗುತ್ತಿದ್ದಂತೆಯೇ ಸ್ಥಳೀಯರು ಹಾಗೂ ಪ್ರವಾಸಿಗರು ಹುಡುಕಾಟ ಆರಂಭಿಸಿದರೂ ಯಾವುದೇ ಸುಳಿವು ಸಿಗಲಿಲ್ಲ. ರಾತ್ರಿ ಪೂರ್ತಿ ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ಜಂಟಿಯಾಗಿ ಶೋಧ ಕಾರ್ಯ ನಡೆಸಿದರು ಆದರೂ ಪತ್ತೆಯಾಗಿಲ್ಲ.

ಇಂದು ಡ್ರೋನ್ ಸಹಾಯದಿಂದ ಹುಡುಕಾಟ ಮುಂದುವರಿದಿದ್ದು, ಸಂಪೂರ್ಣ ಹುಲ್ಲುಗಾವಲು ಹಾಗೂ ಇಳಿಜಾರು ಪ್ರದೇಶಗಳಿಂದ ಕೂಡಿರುವ ಈ ಪ್ರದೇಶದಲ್ಲಿ ಕಾರ್ಯಾಚರಣೆ ಸವಾಲಿನದ್ದಾಗಿದೆ. ಈ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿ ನಾಪತ್ತೆ ಆತಂಕಕ್ಕೆ ಕಾರ್ಣವಾಗಿದೆ.

ಕೆಲ ದಿನಗಳ ಹಿಂದೆ ಕೇರಳದಿಂದ ಕೊಡಗಿನ ತಡಿಯಂಡಿಮೊಳ್ ಬೆಟ್ಟಕ್ಕೆ ಚಾರಕ್ಕೆ ಬಂದಿದ್ದ ಶರಣ್ಯ ಎಂಬ ಯುವತಿ ದಾರಿ ತಪ್ಪಿ ನಾಪತ್ತೆಯಾಗಿದ್ದಳು. ನಿರಂತರ ಶೋಧ ಕಾರ್ಯಾಚಹ್ರಣೆ ಬಳಿಕ ನಾಲ್ಕು ದಿನಗಳ ಬಳಿಕ ಯುವತಿ ಸುರಕ್ಷಿತವಾಗಿ ಪತ್ತೆಯಾಗಿದ್ದಳು, ಈ ಘಟನೆ ಮಾಸುವ ಮುನ್ನವೇ ಈಗ ಚಿಕ್ಕಮಗಳೂರಿನಲ್ಲಿ ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿ ನಾಪತ್ತೆಯಾಗಿದ್ದಾಳೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular