ಚಿಕ್ಕಮಗಳೂರು: ಲಾರಿ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಇಲ್ಲಿನ ಅಜ್ಜಂಪುರ ತಾಲೂಕಿನ ಬಗ್ಗುವಳ್ಳಿ ಗೇಟ್ ಬಳಿ ಲಾರಿ ಹಾಗೂ ಟ್ರ್ಯಾಕ್ಟರ್ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಟ್ರ್ಯಾಕ್ಟರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. 13 ಜನರು ಗಂಭೀರವಾಗಿ ಗಾಯಗೊಂಡಿದದರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗ್ರ್ ದಾಖಲಿಸಲಾಗಿದೆ.
ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇನ್ನೋರ್ವ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಮಾಳಿಗೆಹಟ್ಟಿ ಗ್ರಾಮದ ಮಂಜುನಾಥ್ ಸ್ಥಳದಲ್ಲೇ ಮೃತಪಟ್ಟವರು. ಇನ್ನೋರ್ವನ ಗುರುತು ಇನ್ನಷ್ಟೇ ತಿಳಿಯಬೇಕಿದೆ. ಘತನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

