HomeKarnatakaಮುತ್ತೋಡಿ ಅರಣ್ಯ ಪ್ರದೇಶದಲ್ಲಿ ಭೀಕರ ಕಾಡ್ಗಿಚ್ಚು: ಅಪಾರ ಪ್ರಮಾಣದ ಸಸ್ಯ ಸಂಪತ್ತು ಬೆಂಕಿಗಾಹುತಿ

ಮುತ್ತೋಡಿ ಅರಣ್ಯ ಪ್ರದೇಶದಲ್ಲಿ ಭೀಕರ ಕಾಡ್ಗಿಚ್ಚು: ಅಪಾರ ಪ್ರಮಾಣದ ಸಸ್ಯ ಸಂಪತ್ತು ಬೆಂಕಿಗಾಹುತಿ

ಚಿಕ್ಕಮಗಳೂರು: ಮುತ್ತೋಡಿ ಅರಣ್ಯ ಪ್ರದೇಶದಲ್ಲಿ ಭಿಕರ ಕಾಡ್ಗಿಚ್ಚು ಸಂಭವಿಸಿದ್ದು, ಅಪಾರ ಪ್ರಮಾಣದ ವನ್ಯ ಸಂಪತ್ತು ಬೆಂಕಿಗಾಹುತಿಯಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಮುತ್ತೋಡಿ ಭಾಗದ ಅರಣ್ಯದಲ್ಲಿ ಕಳೆದ ಎರಡು ದಿನಗಳಿಂದ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಅರಣ್ಯ ಪ್ರದೇಶ ಬೆಂಕಿಯ ಕೆನ್ನಾಲಿಗೆಗೆ ಧಗ ಧಗನೆ ಹೊತ್ತಿ ಉರಿಯುತ್ತಿದೆ. ಅಪಾರ ಪ್ರಮಾಣದ ಅಪರೂಪದ ಸಯಸ್ಯ ಸಂಪತ್ತು ಸುಟ್ಟು ಕರಕಲಾಗಿವೆ.

ಭದ್ರಾ ಅಭಯಾರಣ್ಯ ವ್ಯಾಪ್ತಿಗೆ ಕಾಡ್ಗಿಚ್ಚು ಹಬ್ಬಿದ್ದು, ಸ್ಥಳೀಯರು ಹಾಗೂ ಪರಿಸರ ಪ್ರೇಮಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಸಸ್ಯ ಸಂಪತ್ತಿನ ಜೊತೆಗೆ ವನ್ಯ ಜೀವಿಗಳು ಬೆಂಕಿಗೆ ಬಲಿಯಾಗುವ ಸಾಧ್ಯತೆ ದಟ್ಟವಾಗಿದೆ. ಮುತ್ತೋಡಿ ಅರಣ್ಯದ ಎಮ್ರಹಳ್ಳಿ ಮತ್ತು ಹೊಸಕಾನ್ ಸುತ್ತಮುತ್ತಲಿನ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಸಿಲ ಝಳಕ್ಕೆ ಒಣಗಿದ ತರಗೆಲೆಗಳು, ಹುಲ್ಲಿನಿಂದಾಗಿ ಕ್ಷಣ ಕ್ಷಣಕ್ಕೂ ಬೆಂಕಿ ಕಿಲೋಮೀಟರ್ ಗಟ್ಟಲೇ ವ್ಯಾಪಿಸುತ್ತಿದೆ. ಕಾಡ್ಗಿಚ್ಚು ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular