HomeKarnatakaBIG NEWS: ವಕೀಲನ ಮೇಲೆ ಹಲ್ಲೆ; ಪ್ರತಿಭಟನೆ ನಡೆಸಿದ ವಕೀಲರ ವಿರುದ್ಧವೇ ನಾಲ್ಕು ಪ್ರತ್ಯೇಕ ಪ್ರಕರಣ...

BIG NEWS: ವಕೀಲನ ಮೇಲೆ ಹಲ್ಲೆ; ಪ್ರತಿಭಟನೆ ನಡೆಸಿದ ವಕೀಲರ ವಿರುದ್ಧವೇ ನಾಲ್ಕು ಪ್ರತ್ಯೇಕ ಪ್ರಕರಣ ದಾಖಲು

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಪೊಲೀಸ್ ಸಿಬ್ಬಂಧಿಗಳು ಹಲ್ಲೆ ನಡೆಸಿದ್ದ ಪ್ರಕರರಣ ಸಂಬಂಧ ಈಗಾಗಲೇ 6 ಪೊಲೀಸ್ ಸಿಬ್ಬಂದಿ ಮೇಲೆ ಎಫ್ ಐ ಆರ್ ದಾಖಲಾಗಿದ್ದು, ಅವರನ್ನು ಅಮಾನತುಗೊಳಿಸಲಾಗಿದೆ.

ವಕೀಲನ ಮೇಲಿನ ಹಲ್ಲೆ ಖಂಡಿಸಿ ವಕೀಲರು ಚಿಕ್ಕಮಗಳೂರಿನ ಪೊಲೀಸ್ ಠಾಣೆಯಲ್ಲಿ ಪ್ರತಿಭಟನೆ ನಡೆಸಿದ್ದು, ಠಾಣೆಯಲ್ಲಿ ಪ್ರತಿಭಟನೆ ನಡೆಸಿರುವ ವಕೀಲರ ವಿರುದ್ಧ ನಾಲ್ಕು ಪ್ರತ್ಯೇಕ ಎಫ್ ಐ ಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಠಾಣೆಯಲ್ಲಿ ಪ್ರತಿಭಟನೆ ನಡೆಸಿದ್ದ ವೇಳೆ ವಕೀಲರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಲ್ಲೆ ಖಂಡಿಸಿ ಶನಿವಾರ ಮಧ್ಯರಾತ್ರಿವರೆಗೂ ಚಿಕ್ಕಮಗಳೂರಿನ ಹನುಮಂತಪ್ಪ ಸರ್ಕಲ್ ನಲ್ಲಿ ಪೊಲೀಸರು ಹಾಗೂ ಕುಟುಂಬದವರು ಪ್ರತಿಭಟನೆ ನಡೆಸಿದರು. ಹಲ್ಲೆ ನಡೆಸಿದವರ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಆಗ್ರಹಿಸಿದರು.

ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಚಿಕ್ಕಮಗಳೂರು ಜಿಲ್ಲಾ ಬಾರ್ ಅಸೋಸಿಯೇಷನ್ ಅಧ್ಯಕ್ಷ ಸುಧಾಕರ್, ವಕೀಲ ಪ್ರೀತಮ್ ಸೇರಿದಂತೆ 15 ವಕೀಲರ ವಿರುದ್ಧ ಸೆಕ್ಷನ್ 503, 406, 353, 149 ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular