HomeKarnatakaಕೆರೆ ಬಳಿ ಆಟವಾಡುತ್ತಿದ್ದಾಗ ದುರಂತ: ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ದಾರುಣ ಸಾವು

ಕೆರೆ ಬಳಿ ಆಟವಾಡುತ್ತಿದ್ದಾಗ ದುರಂತ: ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ದಾರುಣ ಸಾವು

ಚಿಕ್ಕಬಳ್ಳಾಪುರ: ಕೆರೆ ಬಳಿ ಆಟವಾಡುತ್ತಿದ್ದ ಮಕ್ಕಳು ನೀರಿಗೆ ಬಿದ್ದು ಮುಳುಗುತ್ತಿದ್ದಾಗ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರಗಮಲ್ಲ ಕೆರೆಯಲ್ಲಿ ನಡೆದಿದೆ.

ಬೆಂಗಳೂರಿನ ಬನಶಂಕರಿ ಮೂಲದ ತಬುಸುಮ್ ಖಾನ್ (24) ಮೃತ ದುರ್ದೈವಿ. ಮುರುಗಮಲ್ಲಾದ ದರ್ಗಾಗೆ ಬಂದಿದ್ದ ಕುಟುಂಬಸ್ಥರು ಕೆರೆ ಬಳಿ ನೀರಿನಲ್ಲಿ ಆಟವಾಡುತ್ತಿದ್ದರು. ತಾಯಿ ಬಟ್ಟೆಯನ್ನು ತರಲು ಹೋದಾಗ ಮಕ್ಕಳು ಕೆರೆಗೆ ಹೋಗಿದ್ದು ಈ ವೇಳೆ ನೀರಿನಲ್ಲಿ ಮುಳುಗುತ್ತಿದ್ದರು.

ಮಕ್ಕಳು ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ತಾಯಿ ಕೂಡಲೇ ಕೆರೆಗೆ ದುಮುಕಿದ್ದಾರೆ. ಮೂವರು ಕೆರೆಯಲ್ಲಿ ಮುಳುಗುತ್ತಿದ್ದಾಗ ಸಂಬಂಧಿಕರು ಹಾಗೂ ತಬುಸುಮ್ ಅವರ ಪತಿ ಮಕ್ಕಳನ್ನು ರಕ್ಷಿಸಿದ್ದಾರೆ. ಆದರೆ ಈಜು ಬಾರದೇ ತಬುಸುಮ್ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಕ್ಕಳನ್ನ ರಕ್ಷಣೆ ಮಾಡಿದರೂ ಪತ್ನಿಯನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಪತಿ ಕಣ್ಣೀರಿಟ್ಟಿದ್ದಾನೆ. ದರ್ಗಾಕ್ಕೆಂದು ಬಂದ ಕುಟುಂಬ ಮಹಿಳೆಯನ್ನು ಕಳೆದುಕೊಂಡು ಆಘಾತಕ್ಕೊಳಗಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular