HomeKarnatakaಪ್ರವಾಸಕ್ಕೆ ಹೋದಾಗಲೇ ದುರಂತ: ಹೃದಯಾಘಾತದಿಂದ ಯುವಕ ಸಾವು

ಪ್ರವಾಸಕ್ಕೆ ಹೋದಾಗಲೇ ದುರಂತ: ಹೃದಯಾಘಾತದಿಂದ ಯುವಕ ಸಾವು

ಚಿಕ್ಕಮಗಳೂರು: ಪ್ರವಾಸಕ್ಕೆ ಬಂದಿದ್ದ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆ ಗುಡ್ಡದಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯ ನರೇಶ್(26) ಮೃತಪಟ್ಟವರು. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ನರೇಶ್ ವಾರಾಂತ್ಯ ರಜೆ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ಬೆಂಗಳೂರಿನಿಂದ ದೇವರಮನೆ ಗುಡ್ಡ ಪ್ರವಾಸಿ ತಾಣಕ್ಕೆ ಬಂದಿದ್ದರು.

ದೇವರಮನೆ ಗುಡ್ಡ ನೋಡಿಕೊಂಡು ವಾಪಸ್ ಬರುವಾಗ ರಸ್ತೆ ಮಧ್ಯೆ ತುಂತುರು ಮಳೆ ಹಾಗೂ ಚಳಿ ಎಂದು ಕೋಟ್ ಹಾಕಿಕೊಳ್ಳಲು ಬೈಕ್ ನಿಲ್ಲಿಸಿದ್ದಾರೆ. ಈ ವೇಳೆ ಇದ್ದಕ್ಕಿದ್ದಂತೆ ಅಬರು ಕುಸಿದು ಬಿದ್ದಿದ್ದು, ತಕ್ಷಣವೇ ಸ್ನೇಹಿತರು ಹಾಗೂ ಸ್ಥಳೀಯರು ಸೇರಿ ಸಮಾಜ ಸೇವಕ, ಆಂಬುಲೆನ್ಸ್ ಚಾಲಕ ಆರಿಫ್ ನೇತೃತ್ವದಲ್ಲಿ ಬಣಕಲ್ ಗ್ರಾಮದ ಖಾಸಗಿ ಆಸ್ಪತ್ರೆಗೆ ಕರೆ ತಂದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನರೇಶ್ ಮೃತಪಟ್ಟಿದ್ದಾರೆ. ಜೊತೆಗಿದ್ದ ಸ್ನೇಹಿತರು ಕಣ್ಣೀರಿಟ್ಟಿದ್ದಾರೆ. ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular