Chikmagalur : ‘ಮಹಿಷ ದಸರಾ’ ಆಚರಣೆಗೆ ಪ್ರೊ.ಭಗವಾನ್ ಮುಖ್ಯ ಅತಿಥಿ : ನಾಳೆಯಿಂದ 6 ದಿನ ‘ನಿಷೇಧಾಜ್ಞೆ’ ಜಾರಿ

ಚಿಕ್ಕಮಗಳೂರಿನಲ್ಲಿ ನಡೆಯಲಿರುವ ಮಹಿಷಾ ದಸರಾ ಆಚರಣೆಗೆ ಮುಖ್ಯ ಅತಿಥಿಯಾಗಿ ಪ್ರೊ.ಭಗವಾನ್ ಆಗಮಿಸಲಿದ್ದು, ಭಾರಿ ವಿರೋಧ ವ್ಯಕ್ತವಾಗಿದೆ.

ಹೌದು, ಅ.20ರಂದು ಮಹಿಷ ದಸರಾ ಆಚರಣಾ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಹಯೋಗದೊಂದಿಗೆ ಮಹಿಷ ದಸರಾ ಕಾರ್ಯಕ್ರಮ ಆಯೋಜಿಸಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸಾಹಿತಿ ಪ್ರೊ.ಭಗವಾನ್ ಆಗಮಿಸಲಿದ್ದಾರೆ.

ಕೆಲ ಸಂಘಟನೆಗಳ ಮುಖಂಡರು ಬೆದರಿಕೆಯೊಡ್ಡಿ, ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದಾಗಿ ಹೇಳಿಕೆ ನೀಡಿರುವ ಹಿನ್ನೆಲೆ ಜಿಲ್ಲಾಡಳಿತ ಮುಂಜಾಗೃತಾ ಕ್ರಮವಾಗಿ ನಾಳೆಯಿಂದ 6 ದಿನ 144 ಸೆಕ್ಷನ್ ಜಾರಿಗೊಳಿಸಿದೆ. ಈ ಸಂಬಂಧ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read