HomeCrimeಬೆಂಗಳೂರಲ್ಲಿ ದಾರುಣ ಘಟನೆ: ಮಹಡಿ ಮೇಲಿಂದ ಬಿದ್ದು ಮಗು ಸಾವು

ಬೆಂಗಳೂರಲ್ಲಿ ದಾರುಣ ಘಟನೆ: ಮಹಡಿ ಮೇಲಿಂದ ಬಿದ್ದು ಮಗು ಸಾವು

ಬೆಂಗಳೂರು: ಮಹಡಿ ಮೇಲಿಂದ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿದ ಘಟನೆ ಹೆಬ್ಬಗೋಡಿಯ ಶಂಕರಪ್ಪ ಬಡಾವಣೆಯಲ್ಲಿ ನಡೆದಿದೆ.

ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಶಂಕರಪ್ಪ ಬಡಾವಣೆಯಲ್ಲಿ ಘಟನೆ ನಡೆದಿದೆ. ಕಲಬುರಗಿ ಮೂಲದ ಜಗದೀಶ್ ಮತ್ತು ಪೂಜಾ ದಂಪತಿಯ ಪುತ್ರ ಶ್ರೇಯನ್ ಮೃತಪಟ್ಟ ಮಗು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಗದೀಶ್ BMRCL ನಲ್ಲಿ ಕೆಲಸ ಮಾಡುತ್ತಿದ್ದಾರೆ. ಮೊದಲನೇ ಮಹಡಿಯಲ್ಲಿ ಆಟವಾಡುತ್ತಿದ್ದಾಗ ಮಗು ಆಯತಪ್ಪಿ ಕೆಳಗೆ ಬಿದ್ದಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ. ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular