HomeKarnatakaನೊಂದ ಮಹಿಳೆಯರೇ ಈತನ ಟಾರ್ಗೆಟ್: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬ್ಲ್ಯಾಕ್ ಮೇಲ್: ವಕೀಲ, ವರದಿಗಾರನೆಂದು...

ನೊಂದ ಮಹಿಳೆಯರೇ ಈತನ ಟಾರ್ಗೆಟ್: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬ್ಲ್ಯಾಕ್ ಮೇಲ್: ವಕೀಲ, ವರದಿಗಾರನೆಂದು ಬೆದರಿಕೆ: ಮಕ್ಕಳ ಆಯೋಗದ ಸದಸ್ಯ ಚಂದ್ರೇಗೌಡ ಅರೆಸ್ಟ್

ಬೆಂಗಳೂರು: ಮಕ್ಕಳ ಆಯೋಗದ ಸದಸ್ಯ ಚಂದ್ರೇಗೌಡ ಎಂಬಾತನ ಕಾಮಕಾಂಡ ಬಟಾಬಯಲಾಗಿದೆ. ನೊಂದ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸಹಾಯ ಮಾಡುವ ನೆಪದಲ್ಲಿ ಪರಿಚಯಿಸಿಕೊಂಡು ಹತ್ತಿರವಾಗಿ ಬಳಿಕ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯವೆಸಗಿ, ಬ್ಲ್ಯಾಕ್ ಮೇಲ್ ಮಾಡಿ ಹಣ ದೋಚುತ್ತಿದ್ದ ಪಾಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇದೇ ರೀತಿ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಫೋಟೋ, ವಿಡೀಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿ ಹೆದರಿ ಹಣಕ್ಕೆ ಬೇಡಿಕೆ ಇಡುತ್ತಿದ್ದ. ಅಲ್ಲದೇ ತಾನು ವಕೀಲ, ಲೆಕ್ಚರ್, ಪೊಲೀಸ್ ಅಧಿಕಾರಿ, ಮಾಧ್ಯಮ ವರದಿಗಾರ ಎಂದು ಬಿಂಬಿಸಲು ನಕಲಿ ಐಡಿ ಕಾರ್ಡ್ ಗಳನ್ನು ಮಾಡಿಕೊಂಡು ಹಲವರಿಗೆ ಬೆದರಿಕೆ ಹಾಕಿ ವಸೂಲಿ ಮಾಡುತ್ತಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈತನ ದೌರ್ಜನ್ಯಕ್ಕೆ ಬೇಸತ್ತು ನೊಂದಿದ್ದ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಆರ್.ಆರ್.ನಗರ ಠಾಣೆ ಪೊಲೀಸರು ಚಂದ್ರೇಗೌಡನನ್ನು ಬಂಧಿಸಿದ್ದಾರೆ.

ರಾಮನಗರ ಮಕ್ಕಳ ಆಯೋಗ ಸಮಿತಿ ಸದಸ್ಯನಾಗಿರುವ ಚಂದ್ರೇಗೌಡನದ್ದು ಮಹಿಳೆಯರಿಗೆ ಮೋಸ, ಅಮಾಯಕರಿಗೆ ಬೆದರಿಕೆ ಹಾಕಿ ವಸೂಲಿ ಮಾಡುವುದನ್ನೇ ಕಾರಯಕವನ್ನಾಗಿ ಮಾಡಿಕೊಂಡಿದ್ದಾನೆ ಎಂಬುದು ಬಯಲಾಗಿದೆ.

ಇನ್ನು ಆರೋಪಿ ಮೊಬೈಲ್​​ ಪರಿಶೀಲಿಸಿದಾಗ 20ಕ್ಕೂ ಹೆಚ್ಚು ಮಹಿಳೆಯರ ವಿಡಿಯೋ, ಫೋಟೋ ಪತ್ತೆಯಾಗಿವೆ. ಗಂಡನಿಂದ ದೂರವಾಗಿದ್ದ ಮಹಿಳೆ ಪರಿಚಯ ಮಾಡಿಕೊಂಡಿದ್ದ ಆರೋಪಿ, ಆಕೆಗೆ ನಾನು ಲೆಕ್ಚರ್ ಎಂದು ಪರಿಚಯ ಮಾಡಿಕೊಂಡಿದ್ದ. ನನಗೆ ಡಿವೋರ್ಸ್ ಆಗಿದ್ದು, ನಿನ್ನನ್ನು ಮದುವೆ ಆಗುತ್ತೇನೆಂದು ನಂಬಿಸಿ ಆಕೆಯ ಜೊತೆ ಲೈಂಗಿಕ ಸಂಪರ್ಕ ನಡೆಸಿದ್ದ. ಖಾಸಗಿ ಕ್ಷಣವನ್ನು ವಿಡಿಯೋ ಮಾಡಿಕೊಂಡಿದ್ದ ಚಂದ್ರೇಗೌಡ ಅದನ್ನು ಇಟ್ಟುಕೊಂಡು ಮಹಿಳೆಗೆ ಹೆದರಿಸಿ ಆಕೆಯಿಂದ 5 ಲಕ್ಷ ಹಣ ಪಡೆದಿದ್ದ ಎಂದು ದೂರಲಾಗಿದೆ. ಸಂತ್ರಸ್ತ ಮಹಿಳೆ ಒಮ್ಮೆ ಚಂದ್ರೇಗೌಡನ ಮೊಬೈಲ್ ಪರಿಶೀಲಿಸಿದ್ದ ವೇಳೇ ಮೊಬೈಲ್​​ನಲ್ಲಿ ಹಲವು ಮಹಿಳೆಯರ ವಿಡಿಯೋ, ಚಾಟಿಂಗ್ ಪತ್ತೆಯಾಗಿತ್ತು. ಹೀಗಾಗಿ ಆರೋಪಿ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ಸಂತ್ರಸ್ತೆ ದೂರು ನೀಡಿದ್ದರು.

ಇನ್ನು ದೂರುದಾರ ಮಹಿಳೆಯನ್ನು ಮದುವೆಯಾಗಿ ನಂಬಿಸಿದ್ದ ಆರೋಪಿ ವಿವಾಹವಾಗಿದ್ದೇನೆ ಎಂದು ನಂಬಿಸಲು ಆಕೆಯ ಕೊರಳಿಗೆ ಅರಿಶಿನದ ಕೊಂಬನ್ನೂ ಕಟ್ಟಿದ್ದ. ಸಂತ್ರಸ್ತೆಯ ಆಧಾರ್​​ ಕಾರ್ಡ್​​ ಕೂಡ ಪಡೆದಿದ್ದ ಈತ ತಾನು ಆಕೆಯ ಗಂಡನೆಂದು ಬಿಂಬಿಸಿ ಮಾಡಿಗೆ ಮನೆಯೊಂದಕ್ಕೆ ಕರಾರು ಪತ್ರವನ್ನೂ ಮಾಡಿಸಿದ್ದ. ತನ್ನ ತಾಯಿಯನ್ನೂ ಸಂತ್ರಸ್ತೆಯ ಮನೆಯಲ್ಲೇ ಆತ ಬಿಟ್ಟಿದ್ದು, ವರ್ಷಾನುಗಟ್ಟಲೆ ಆಕೆಯ ಆರೈಕೆಯನ್ನು ದೂರುದಾರ ಮಹಿಳೆ ಮಾಡಿದ್ದಾಳೆ ಎನ್ನಲಾಗಿದೆ. ಸಾಲದ್ದಕ್ಕೆ ಸಂತ್ರಸ್ತೆಯ ಮಗಳ ವ್ಯಾಸಂಗ ಸಂಬಂಧಿತ ದಾಖಲಾತಿಗಳನ್ನೂ ಬದಲಾಯಿಸಿ, ತಾನೇ ಮಹಿಳೆಯ ಗಂಡ ಎಂದು ಬಿಂಬಿಸಲು ಹೊರಟಿದ್ದ ಎಂದು ಆರೋಪಿಸಲಾಗಿದೆ. ಸದ್ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular