HomeKarnatakaದಾರುಣ ಘಟನೆ: ಆಟವಾಡುವಾಗಲೇ ನೀರಿನ ತೊಟ್ಟಿಗೆ ಬಿದ್ದು ಮಗು ಸಾವು

ದಾರುಣ ಘಟನೆ: ಆಟವಾಡುವಾಗಲೇ ನೀರಿನ ತೊಟ್ಟಿಗೆ ಬಿದ್ದು ಮಗು ಸಾವು

ಕೂಡ್ಲಿಗಿ: ಮನೆ ಮುಂದೆ ಆಟವಾಡುವಾಗ ಆಕಸ್ಮಿಕವಾಗಿ ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದಲ್ಲಿ ಸೋಮವಾರ ಸಂಜೆ ನಡೆದಿದೆ.

ವಿಸ್ಮಿತಾ ಮೃತಪಟ್ಟ ಬಾಲಕಿ. ನಾಗರಾಜ ನಾಯ್ಕ, ಕಾವೇರಿ ದಂಪತಿಯ ಪುತ್ರಿಯಾಗಿರುವ ವಿಸ್ಮಿತಾ ಮನೆ ಮುಂದೆ ಆಟವಾಡುವಾಗ ದುರಂತ ಸಂಭವಿಸಿದೆ. ತಂದೆ, ತಾಯಿ ಕೆಲಸಕ್ಕೆ ಹೋಗಿದ್ದ ವೇಳೆ ಘಟನೆ ನಡೆದಿದ್ದು, ಪಕ್ಕದ ಮನೆಯವರು ನೋಡುವ ವೇಳೆಗೆ ವಿಸ್ಮಿತಾ ತೊಟ್ಟಿಗೆ ಬಿದ್ದು ಮೃತಪಟ್ಟಿದ್ದಾಳೆ. ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular