ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಸಾವು ಆರೋಪ; ಆಸ್ಪತ್ರೆಗೆ ನುಗ್ಗಿದ ಸಂಬಂಧಿಕರು; ಪೀಠೋಪಕರಣ ಒಡೆದು ಹಾಕಿ ಆಕ್ರೋಶ

ಬೆಳಗಾವಿ: ವೈದ್ಯರ ನಿರ್ಲಕ್ಷ್ಯದಿಂದ 7ತಿಂಗಳ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ ಮಗುವಿನ ಪೋಷಕರು ಹಾಗೂ ಸಂಬಂಧಿಕರು ಆಸ್ಪತ್ರೆಗೆ ನುಗ್ಗಿ ಗಲಾಟೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಬ್ಯಾಳಿ ಕಾಟಾ ಬಳಿ ನಡೆದಿದೆ.

ಶಿವಾನಂದ ನಿಂಗಪ್ಪ ಬಡಬಡಿ ಎಂಬುವವರ 7 ತಿಂಗಳ ಕಂದ ಮೃತ ಮಗು. ಅನಾರೋಗ್ಯದ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಡರಾತ್ರಿ ವೈದ್ಯರು ಆಂಬುಲೆನ್ಸ್ ಕರೆಸಿ ಬೇರೆ ಆಸ್ಪತ್ರೆಗೆ ಕರೆದೊಯುವಂತೆ ಹೇಳಿದ್ದರು. ಆದರೆ ಈಗ ಮಗು ಸಾವನ್ನಪ್ಪಿದ್ದು, ಇದರಿಂದ ಪೋಷಕರು ಕಂಗಾಲಾಗಿದ್ದಾರೆ. ಮಗು ಕಳೆದುಕೊಂಡಿರುವ ಕುಟುಂಬದವರ ಸಂಬಂಧಿಕರು ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಡಾ.ಮಹಂತೇಶ್ ಕಡಾಡಿಗೆ ಸೇರಿದ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.

ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವನ್ನಪ್ಪಿದ್ದು, ತಮಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ. ಅಲ್ಲದೇ ಆಸ್ಪತ್ರೆಯ ಪೀಠೋಪಕರಣಗಳನ್ನು ಒಡೆದು ಹಾಕಿ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read