HomeKarnatakaBREAKING NEWS: ಮತ್ತೊಂದು ಘೋರ ದುರಂತ: ನೀರಿನ ಸಂಪ್ ಗೆ ಬಿದ್ದು ಒಂದುವರೆ ವರ್ಷದ ಮಗು...

BREAKING NEWS: ಮತ್ತೊಂದು ಘೋರ ದುರಂತ: ನೀರಿನ ಸಂಪ್ ಗೆ ಬಿದ್ದು ಒಂದುವರೆ ವರ್ಷದ ಮಗು ಸಾವು

ಬೆಂಗಳೂರು: ಎರಡು ದಿನಗಳ ಹಿಂದಷ್ಟೆ ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಮಾಸುವ ಮುನ್ನಲ್ಲೇ ಅಂತದ್ದೇ ಮತ್ತೊಂದು ದುರಂತ ಸಂಭವಿಸಿದೆ. ನೀರಿನ ಸಂಪ್ ಗೆ ಬಿದ್ದು ಒಂದುವರೆ ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಉತ್ತರ ಭಾರತ ಮೂಲದ ದಂಪತಿಯ ಮಗು ರಾಜಕುಮಾರ್ ಮೃತ ಮಗು. ಬೆಂಗಳೂರು ಪೂರ್ವ ತಾಲೂಕಿನ ಕುರುಡು ಸಿಣ್ಣೇನಹಳ್ಳಿ ರಸ್ತೆಯ ಸಾಯಿ ಸೆರಿನಿಟಿ ಲೇಔಟ್ ನಲ್ಲಿ ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ಸಂಪ್ ನಲ್ಲಿ ಬಿದ್ದು ಮಗು ಮೃತಪಟ್ಟಿದೆ.

ಕೂಲಿ ಕೆಲಸ ಮಾಡಿಕೊಂಡು ದಂಪತಿ ಮಕ್ಕಳನ್ನು ನೋಡಿಕೊಳ್ಳುತ್ತಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular