HomeKarnatakaದಾರುಣ ಘಟನೆ: ಮೈಮೇಲೆ ಬಿಸಿ ಟೀ ಬಿದ್ದು ಮಗು ಸಾವು

ದಾರುಣ ಘಟನೆ: ಮೈಮೇಲೆ ಬಿಸಿ ಟೀ ಬಿದ್ದು ಮಗು ಸಾವು

ಶಿವಮೊಗ್ಗ: ಮೈಮೇಲೆ ಬಿಸಿ ಟೀ ಬಿದ್ದು ಗಾಯಗೊಂಡಿದ್ದ ಮಗು ಮೃತಪಟ್ಟ ಘಟನೆ ಹೊಸನಗರ ತಾಲೂಕು ನಗರ ಸಮೀಪದ ಹಿರಿಮನೆಯಲ್ಲಿ ನಡೆದಿದೆ.

ಶಾಸಕ ಆರಗ ಜ್ಞಾನೇಂದ್ರ ಅವರ ಹೊಸನಗರ ಭಾಗದ ಆಪ್ತ ಸಹಾಯಕ ರಾಜೇಶ್ ಹಿರಿಮನೆ, ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಅಶ್ವಿನಿ ಪಾಟೀಲ್ ಅವರ ಎರಡು ವರ್ಷದ ಪುತ್ರ ಅಥರ್ವ ಅಕ್ಟೋಬರ್ 24ರಂದು ಗುರುವಾರ ಮೈಮೇಲೆ ಬಿಸಿ ಟೀ ಬೀಳಿಸಿಕೊಂಡು ಗಂಭೀರವಾಗಿ ಗಾಯಗೊಂಡಿದ್ದು, ಮಗುವನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 8 ದಿನಗಳಿಂದ ಚಿಕಿತ್ಚೆ ನೀಡಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮಗು ಮೃತಪಟ್ಟಿದೆ.

ರಾಜೇಶ್ ಅವರ ನೆರೆಮನೆಯ ವ್ಯಕ್ತಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಅಂದು ರಾತ್ರಿ ಅಂತಿಮ ದರ್ಶನಕ್ಕೆ ಬಂದಿದ್ದ ಜನರಿಗೆ ರಾಜೇಶ್ ಮತ್ತು ಅವರ ಪತ್ನಿ ಟೀ ಮಾಡಿ ಪಾತ್ರೆಗೆ ಹಾಕಿ ಜಗಲಿ ಮೇಲೆ ಇಟ್ಟಿದ್ದಾರೆ. ಆಟವಾಡುತ್ತಾ ಅಲ್ಲಿಗೆ ಬಂದ ಅಥರ್ವ ಪಾತ್ರೆಯನ್ನು ಎಳೆದಿದ್ದು, ಮೈಮೇಲೆ ಬಿಸಿ ಟೀ ಚೆಲ್ಲಿ ಗಾಯಗೊಂಡಿದ್ದ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular