ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಕುಂಬ್ರ ಸಮೀಪ ಪರ್ಪುಂಜ ಕೊಯಲತ್ತಡ್ಕ ಬಳಿ ಕಾರ್ ಡಿಕ್ಕಿಯಾಗಿ ಆಟೋದಲ್ಲಿದ್ದ ಮಗು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ.
ಆಟೋ ಚಾಲಕ ಹನೀಫ್ ಬನ್ನೂರು ಅವರ ನಾಲ್ಕೂವರೆ ವರ್ಷದ ಮಗಳು ಶಾಜ್ವಾ ಫಾತಿಮಾ ಮೃತಪಟ್ಟಿದ್ದಾಳೆ. ಹನೀಫ್, ಅವರ ಪತ್ನಿ, ಇಬ್ಬರು ಮಕ್ಕಳು, ಅತ್ತೆಗೆ ಗಾಯವಾಗಿದೆ. ಕುಟುಂಬ ಸಮೇತರಾಗಿ ಪುತ್ತೂರಿನಿಂದ ತಿಂಗಳಾಡಿ ಕಡೆಗೆ ಆಟೋ ಬರುತ್ತಿದ್ದ ವೇಳೆ ಸುಳ್ಯ ಕಡೆಯಿಂದ ಕಾರ್ ಡಿಕ್ಕಿ ಹೊಡೆದಿದೆ. ಬಸ್ ಓವರ್ ಟೇಕ್ ಮಾಡಲು ಹೋಗಿ ಆಟೋಗೆ ಕಾರ್ ಡಿಕ್ಕಿ ಹೊಡೆದಿದೆ. ಆಟೋದಲ್ಲಿದ್ದ ಮಗು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಸೇರಿ ಐವರು ಗಾಯಗೊಂಡಿದ್ದಾರೆ.
