HomeLatest Newsಕಾರ್ ಡಿಕ್ಕಿಯಾಗಿ ಆಟೋದಲ್ಲಿದ್ದ ಮಗು ಸಾವು: ಇಬ್ಬರು ಮಕ್ಕಳು ಐವರಿಗೆ ಗಂಭೀರ ಗಾಯ

ಕಾರ್ ಡಿಕ್ಕಿಯಾಗಿ ಆಟೋದಲ್ಲಿದ್ದ ಮಗು ಸಾವು: ಇಬ್ಬರು ಮಕ್ಕಳು ಐವರಿಗೆ ಗಂಭೀರ ಗಾಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಕುಂಬ್ರ ಸಮೀಪ ಪರ್ಪುಂಜ ಕೊಯಲತ್ತಡ್ಕ ಬಳಿ ಕಾರ್ ಡಿಕ್ಕಿಯಾಗಿ ಆಟೋದಲ್ಲಿದ್ದ ಮಗು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ.

ಆಟೋ ಚಾಲಕ ಹನೀಫ್ ಬನ್ನೂರು ಅವರ ನಾಲ್ಕೂವರೆ ವರ್ಷದ ಮಗಳು ಶಾಜ್ವಾ ಫಾತಿಮಾ ಮೃತಪಟ್ಟಿದ್ದಾಳೆ. ಹನೀಫ್, ಅವರ ಪತ್ನಿ, ಇಬ್ಬರು ಮಕ್ಕಳು, ಅತ್ತೆಗೆ ಗಾಯವಾಗಿದೆ. ಕುಟುಂಬ ಸಮೇತರಾಗಿ ಪುತ್ತೂರಿನಿಂದ ತಿಂಗಳಾಡಿ ಕಡೆಗೆ ಆಟೋ ಬರುತ್ತಿದ್ದ ವೇಳೆ ಸುಳ್ಯ ಕಡೆಯಿಂದ ಕಾರ್ ಡಿಕ್ಕಿ ಹೊಡೆದಿದೆ. ಬಸ್ ಓವರ್ ಟೇಕ್ ಮಾಡಲು ಹೋಗಿ ಆಟೋಗೆ ಕಾರ್ ಡಿಕ್ಕಿ ಹೊಡೆದಿದೆ. ಆಟೋದಲ್ಲಿದ್ದ ಮಗು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಸೇರಿ ಐವರು ಗಾಯಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular