ಬೆಂಗಳೂರು: ಬಾಲ್ಯವಿವಾಹ ನಿಷೇಧ ತಿದ್ದುಪಡಿ ಕಾಯ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಬಾಲ್ಯವಿವಾಹ ಸಂಪೂರ್ಣ ನಿಷೇಧ. ಬಾಲ್ಯವಿವಾಹಕ್ಕೆ ಒತ್ತಡ ಹೇರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದರು.
ಬಾಲ್ಯವಿವಾಹಕ್ಕೆ ಕುಟುಂಬದವರು ಒಪ್ಪಿಗೆ ನೀಡಿದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ನಿಶ್ಚಿತಾರ್ಥ ಮಾತುಕತೆಯಲ್ಲಿ ಭಾಗಿಯಾದವರ ವಿರುದ್ಧವೂ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಷ್ಟೇ ಅಲ್ಲ ತೊಟ್ಟಿಲು ಮದುವೆಯಾದರೂ ಶಿಕ್ಷೆ ವಿಧಿಸಲಾಗುವುದು. ಯಾರೇ ಒತ್ತಡ ಹಾಕಿದರೂ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನಲ್ಲಿ ಕಾನೂನು ಜಾರಿಗೆ ಬಂದಿದೆ ಎಂದು ತಿಳಿಸಿದರು.